ಸ್ವಂತ ಜಿಲ್ಲೆಗಳಿಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಶಿಕ್ಷಕರ ಪ್ರತಿಭಟನೆ

050922 Sirwar Teachers Protest
ಸ್ವಂತ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿರುವ ಶಿಕ್ಷಕರಾದ ಪ್ರಶಾಂತ ಮೊಹರೆಕರ್, ರಾಧಿಕಾ, ಶೈಲಜಾ, ಗಂಗಾರಾಣಿ ಇತರರು.
Published on

ಸಿರವಾರ: ತಮ್ಮ ಸ್ವಂತ ಜಿಲ್ಲೆಗಳಿಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸೆ.5 ಮತ್ತು 6ರಂದು ಶಿಕ್ಷಕರು ಹಮ್ಮಿಕೊಂಡಿರುವ ಪ್ರತಿಭಟನೆಗೆ ಬೆಂಬಲಿಸಿ, ಸಿರವಾರ ತಾಲೂಕಿನ ವಿವಿಧ ಗ್ರಾಮಗಳ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 50ಕ್ಕೂ ಹೆಚ್ಚು ಶಿಕ್ಷಕರು ಬೆಂಗಳೂರಿಗೆ ತೆರಳಿದರು.

ಶಿಕ್ಷಕಿ ದಿವ್ಯಾ ನಾಯ್ಕ ಮಾತನಾಡಿ, 15-25 ವರ್ಷಗಳಿಂದ ಒಂದೇ ಜಿಲ್ಲೆಯಲ್ಲಿ ವೃತ್ತಿ ನಿರ್ವಹಿಸುತ್ತಿರುವುದರಿಂದ ವಯಸ್ಸಾದ ತಂದೆ, ತಾಯಿ, ಕುಟುಂಬದ ಜತೆಗೆ ಇರಲಾಗುತ್ತಿಲ್ಲ. ಸ್ವಂತ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಕಳೆದ ಜೂನ್ ತಿಂಗಳಲ್ಲಿ ಮೂರು ದಿನಗಳ ಕಾಲ ಪ್ರತಿಭಟನೆ ನಡೆಸಿದರೂ ಪ್ರಯೋಜವಾಗಿಲ್ಲ. ಅದಕ್ಕೆ ಮತ್ತೊಮ್ಮೆ ರಾಜ್ಯ ಸರ್ಕಾರಕ್ಕೆ ನಮ್ಮ ಸಮಸ್ಯೆ ಮನವರಿಕೆ ಮಾಡಲು ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net