ಹಡಪದ ಅಪ್ಪಣ್ಣ ಜಯಂತಿ ತಪ್ಪದೆ ಆಚರಿಸಿ

Published on

ಸಿರವಾರ: ಜು.21 ರಂದು ಹಡಪದ ಅಪ್ಪಣ್ಣ ಜಯಂತಿಯನ್ನು ಕಚೇರಿಗಳಲ್ಲಿ ತಪ್ಪದೆ ಆಚರಣೆ ಮಾಡಬೇಕು ಎಂದು ತಹಸೀಲ್ದಾರ್ ರವಿ ಎಸ್.ಅಂಗಡಿ ಹೇಳಿದರು.

ಪಟ್ಟಣದ ತಹಸಿಲ್ ಕಚೇರಿಯಲ್ಲಿ ಗುರುವಾರ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಬಸವ ವೃತ್ತದಿಂದ ಈಶ್ವರ ದೇವಸ್ಥಾನದವರೆಗೂ ಹಡಪದ ಅಪ್ಪಣ್ಣರ ಭಾವಚಿತ್ರ ಮೆರವಣಿಗೆ ಮಾಡಲಾಗುತ್ತದೆ. ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸಲಾಗುವುದು. ಎಲ್ಲ ಅಧಿಕಾರಿಗಳು ಕಾರ್ಯಕ್ರಮದಲ್ಲಿ ತಪ್ಪದೆ ಭಾಗವಹಿಸಬೇಕು. ಗೈರಾದವರಿಗೆ ನೋಟಿಸ್ ನೀಡಲಾಗುವುದು ಎಂದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ, ಸಿಡಿಪಿಒ ನಾಗರತ್ನಾ ನಾಯಕ, ಸರ್ಕಾರಿ ನೌಕರರ ಸಂಘದ ಸಿರವಾರ ತಾಲೂಕು ಅಧ್ಯಕ್ಷೆ ನಾಗಮ್ಮ ಸೇರಿ ಸಮಾಜದ ಮುಖಂಡರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net