ಮಕ್ಕಳನ್ನು ಹಕ್ಕಿನಿಂದ ವಂಚಿಸದಿರಿ

SWR-1
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ತ ಸಿರವಾರದಲ್ಲಿ ಆಯೋಜಿಸಿದ್ದ ಜಾಥಾಕ್ಕೆ ತಹಸೀಲ್ದಾರ್ ರವಿ ಎಸ್.ಅಂಗಡಿ ಚಾಲನೆ ನೀಡಿದರು. ಪಪಂ ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ, ಸಿಡಿಪಿಒ ನಾಗರತ್ನಾ ನಾಯಕ, ಪಿಎಚ್‌ಸಿ ವೈದ್ಯಾಧಿಕಾರಿ ಸುನೀಲ್ ಸರೋದೆ ಇತರರಿದ್ದರು.
Published on

ಸಿರವಾರ: ಬಾಲಕ ಕಾರ್ಮಿಕ ನಿರ್ಮೂಲನೆ ಮಾಡಬೇಕಾದರೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ತಹಸೀಲ್ದಾರ್ ರವಿ ಎಸ್.ಅಂಗಡಿ ಹೇಳಿದರು.

ಪಟ್ಟಣದಲ್ಲಿ ತಾಲೂಕಾಡಳಿತ, ತಾಲೂಕ ಪಂಚಾಯಿತಿ, ಪೊಲೀಸ್, ಶಿಕ್ಷಣ ಹಾಗೂ ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದರು.

ಬಾಲಕರನ್ನು ಕೆಲಸಕ್ಕೆ ಕಳುಹಿಸದೆ ಶಾಲೆಗೆ ಕಳುಹಿಸುವಂತೆ ಪಾಲಕರಿಗೆ ತಿಳಿ ಹೇಳಬೇಕು. ಹದಿನಾಲ್ಕು ವರ್ಷದೊಳಗಿನ ಮಕ್ಕಳನ್ನು ಅವರ ಶಿಕ್ಷಣ ಹಕ್ಕಿನಿಂದ ವಂಚಿಸಿ, ದುಡಿಮೆಗೆ ಬಳಸುವುದು ಕಾನೂನು ಅಪರಾಧ.

ಇದಕ್ಕಾಗಿ, ಮಕ್ಕಳಿಂದ ದುಡಿಸಿಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನಿನಡಿ ಶಿಕ್ಷೆ ವಿಧಿಸಲು ಅವಕಾಶವಿದೆ ಎಂಬುದನ್ನು ಪಾಲಕರಿಗೆ ಮನವರಿಕೆ ಮಾಡಬೇಕು. ಬಾಲಕರನ್ನು ಕೆಲಸಕ್ಕೆ ನೇಮಿಸಿಕೊಂಡವರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಪಪಂ ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ, ಸಿಡಿಪಿಒ ನಾಗರತ್ನಾ ನಾಯಕ, ಪಿಎಚ್‌ಸಿ ವೈದ್ಯಾಧಿಕಾರಿ ಸುನೀಲ್ ಸರೋದೆ, ಎಎಸ್‌ಐ ಬಸನಗೌಡ, ಕಂದಾಯ ಅಧಿಕಾರಿ ಶ್ರೀನಾಥ, ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀದೇವಿ, ಸಿಬ್ಬಂದಿ ನೀಲಮ್ಮ, ದೈಹಿಕ ಶಿಕ್ಷಕ ಮಹೆಬೂಬ್ ಪಾಷಾ, ತಹಸಿಲ್ ಕಚೇರಿ ಸಿಬ್ಬಂದಿ ಅಮರ್ ಹಾಗೂ ವಿದ್ಯಾರ್ಥಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net