ಸಿರಿ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆ

Published on

ಬೆಳ್ತಂಗಡಿ: ಸಿರಿ ಸಂಸ್ಥೆ ವತಿಯಿಂದ 2025ನೇ ವರ್ಷದ ಕ್ಯಾಲೆಂಡರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆ, ಸಿರಿ ಸಂಸ್ಥೆ ಸ್ಥಾಪಕಾಧ್ಯಕ್ಷೆ ಹೇಮಾವತಿ ವೀ.ಹೆಗ್ಗಡೆ ಬಿಡುಗಡೆಗೊಳಿಸಿದರು.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಜನಾರ್ದನ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಹೆಗ್ಗಡೆ ದಂಪತಿಗೆ ಗೌರವಾರ್ಪಣೆ ಸಲ್ಲಿಸಿದರು. ಸಿರಿ ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್ ಶೇಖರ್, ಸಿರಿ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದರು.

ಸಿರಿ ಸಂಸ್ಥೆ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ, ಸಿರಿ ಸಂಸ್ಥೆ ವಿವಿಧ ವಿಭಾಗದ ಮೇಲಾಧಿಕಾರಿಗಳು, ಮಾರುಕಟ್ಟೆ ವಿಭಾಗದ ವಿವಿಧ ವಲಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net