ಯಕ್ಷಗಾನ ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯವಾಗಲಿ : ಎಡನೀರು ಶ್ರೀ ಆಶಯ

edaneer (1)
ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ.
Published on

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ಯಕ್ಷಗಾನದ ಬೆಳವಣಿಗೆ ಜತೆಗೆ ಯಕ್ಷಗಾನ ಕಲೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಿಂದ ನಡೆಯಲಿ ಎಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ಹೇಳಿದರು.

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಿಂದ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ನಾಲ್ಕು ದಿನಗಳ ಸಾಂಸ್ಕೃತಿಕ ಉತ್ಸವದ ಸಮಾರೋಪದಲ್ಲಿ ಮಾತನಾಡಿದರು.

ಉಪ್ಪಳ ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಚಟುವಟಿಕೆ ನಡೆಸುತ್ತಿರುವ ಪ್ರತಿಷ್ಠಾನ ಯಕ್ಷಗಾನದ ಬಗ್ಗೆ ನಡೆಸುತ್ತಿರುವ ಕಾರ್ಯಯೋಜನೆಗಳು ಶ್ಲಾಘನೀಯ ಎಂದರು.

ಹಂಗಾರಕಟ್ಟೆ ಯಕ್ಷಗಾನ ಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಟಿ.ಎಂ.ಸತೀಶ್ ಅವರಿಗೆ ಸದಸ್ಯತ್ವ ನೀಡಿ ಗೌರವಿಸಲಾಯಿತು. ಮಾಂಡೋವಿ ಮೋಟಾರ್ಸ್ ಪ್ರಬಂಧಕ ಶಶಿಧರ ಕಾರಂತ, ಕಸಾಪ ಗಡಿನಾಡು ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಕರ್ನಾಟಕ ಬ್ಯಾಂಕ್‌ನ ಸುಜಿತ್, ಶೀನ ಶೆಟ್ಟಿ ಕಜೆ, ಸಿರಿಬಾಗಿಲು ವೆಂಕಪ್ಪಯ್ಯ ಅವರ ಹಿರಿಯ ಪುತ್ರಿ ಮಂಗಳ ಗೌರಿ ಕುದ್ರೆಪ್ಪಾಡಿ ಉಪಸ್ಥಿತರಿದ್ದರು. ಡಾ.ಶ್ರುತ ಕೀರ್ತಿರಾಜ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಪ್ರಸನ್ನ ಕಾರಂತ ದೇಶಮಂಗಲ ವಂದಿಸಿದರು.

ವಿಚಾರ ಸಂಕಿರಣ, ಪ್ರಶಸ್ತಿ ಪ್ರದಾನ

ಸಂಗೀತ ವಿದುಷಿ ಶಕುಂತಲಾ ಕೆ.ಭಟ್ ಕುಂಚಿನಡ್ಕ ಅವರಿಗೆ ಸಿರಿಬಾಗಿಲು ವೆಂಕಪ್ಪಯ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರತಿಷ್ಠಾನಕ್ಕೆ ಸಹಕಾರ ನೀಡಿದವರನ್ನು ಗೌರವಿಸಲಾಯಿತು. ಏಳು ಕೃತಿಗಳ ಬಗ್ಗೆ ವಿಚಾರ ಸಂಕಿರಣ ನಡೆಯಿತು. ರಾಧಾಕೃಷ್ಣ ಕಲ್ಚಾರ್ ವಿಟ್ಲ, ಡಾ.ನಾಗವೇಣಿ ಮಂಚಿ, ಪತ್ರಕರ್ತ ಲಕ್ಷ್ಮೀ ಮಚ್ಚಿನ, ರಾಘವೇಂದ್ರ ಉಡುಪ ನೇರಳೆಕಟ್ಟೆ, ಕುಮಾರ ಸುಬ್ರಹ್ಮಣ್ಯ ಮುಳಿಯಾಲ ಮುಂತಾದವರು ಭಾಗವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net