

ಸಿರಿಗೆರೆ: ಕರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕ ಸಮಾರಂಭ ಮುಂದೂಡುವಂತೆ ಮನವಿ ಮಾಡಿದ ಕಾರಣ ಪ್ರತಿ ಸೋಮವಾರದ ಸಿರಿಗೆರೆಯ ತರಳಬಾಳು ಬೃಹನ್ಮಠದ ಸದ್ಧರ್ಮ ನ್ಯಾಯಪೀಠದ ಕಾರ್ಯಕಲಾಪ ನಡೆಯುವುದಿಲ್ಲ ಎಂದು ಮಠದ ಪ್ರಕಟಣೆ ತಿಳಿಸಿದೆ.
ಸರ್ಕಾರ ನಾಗರಿಕರ ಆರೋಗ್ಯ ಗಮನದಲ್ಲಿಟ್ಟುಕೊಂಡು ಹಲವು ನಿರ್ಬಂಧಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಎಲ್ಲರೂ ಪಾಲಿಸಬೇಕಿದ್ದು, ನ್ಯಾಯಪೀಠ ರಜೆ ಇರುತ್ತದೆ ಎಂದು ತಿಳಿಸಿದೆ.