ನಾಳೆ ನೂತನ ಗ್ರಾಪಂ ಕಾರ್ಯಾಲಯ ಉದ್ಘಾಟನೆ

SIRIGERE GRAMA PANCHAYATH 13 (2)
Published on

ಸಿರಿಗೆರೆ: ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಗ್ರಾಮ ಪಂಚಾಯಿತಿ ಕಾರ್ಯಾಲಯವನ್ನು ಫೆ.15ರ ಬೆಳಗ್ಗೆ 11ಕ್ಕೆ ತರಳಬಾಳು ಜಗದ್ಗುರು ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸುವರು.

ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅಧ್ಯಕ್ಷತೆ ವಹಿಸುವರು. ಆರೋಗ್ಯ ಸಚಿವ ಬಿ.ಶ್ರೀರಾಮುಲು, ಜಿಲ್ಲಾ ಪಂಚಾಯಿತಿ ಸಿಇಒ ಸಿ.ಸತ್ಯಭಾಮ, ತಾಲೂಕು ಪಂಚಾಯಿತಿ ಇಒ ಎಚ್.ಕೃಷ್ಣಾನಾಯ್ಕಾ, ಉಪ ಹಾಗೂ ಸಹಾಯಕ ಕಾರ್ಯದರ್ಶಿಗಳು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿರುವರು ಎಂದು ಗ್ರಾಪಂ ಪಿಡಿಒ ಬಿ.ಲೋಕೇಶ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net