ಮೂಲ ಸೌಲಭ್ಯಕ್ಕೆ ಆದ್ಯತೆ

Sirigere Chandrappa 12
Published on

ಸಿರಿಗೆರೆ: ಸಮೀಪದ ಹನುಮನಹಳ್ಳಿ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಚಾಲನೆ ನೀಡಿದರು.

ಗ್ರಾಮಗಳಲ್ಲಿ ರಸ್ತೆ, ನೀರು ಮುಂತಾದ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡಲಾಗಿದೆ. ಜನಸಾಮಾನ್ಯರು ಇಂತಹ ಕಾರ್ಯಗಳಿಗೆ ಸ್ಪಂದಿಸಬೇಕಾಗಿದೆ ಎಂದರು.

ತಾಪಂ ಸದಸ್ಯ ಎನ್.ಕಲ್ಲೇಶ್, ಬಿಜೆಪಿ ಮಂಡಲ ಅಧ್ಯಕ್ಷ ಶೈಲೇಶ್, ಪ್ರಧಾನ ಕಾರ್ಯದರ್ಶಿ ಸಿರಿಗೆರೆ ಮೋಹನ್, ಮುಖಂಡರಾದ ಸಾಮಿಲ್ ಶಿವಣ್ಣ, ಸಿದ್ದೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net