

ಸಿರಿಗೆರೆ: ಸಮೀಪದ ಆಲಘಟ್ಟ ಗ್ರಾಮದಲ್ಲಿ ಶುಕ್ರವಾರ ಗ್ರಾಪಂ ಸಿಬ್ಬಂದಿ ಕರೊನಾ ವೈರಸ್ ಕುರಿತು ಜಾಗೃತಿ ಮೂಡಿಸಿದರು.
ದಿನದಿಂದ ದಿನಕ್ಕೆ ಕರೊನಾ ವೈರಸ್ ಆತಂಕ ಹೆಚ್ಚುತ್ತಿದೆ. ಜನರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಮಹಾಮಾರಿ ರೋಗ ತಡೆಗೆ ಮುಂದಾಗಬೇಕು ಎಂದು ಗ್ರಾಪಂ ಪಿಡಿಒ ಜಯಶೀಲಾ ಮನವಿ ಮಾಡಿದರು.
ಕೆಲಸ ಕಾರ್ಯಗಳಿಗೆ ಬೆಂಗಳೂರು ಕಡೆ ಹೋಗಿದ್ದ ಗ್ರಾಮಸ್ಥರನ್ನು ತಪಾಸಣೆ ನಡೆಸಿದ್ದು, ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಅವರಿಗೆ ಸೂಚನೆ ನೀಡಲಾಗಿದೆ ಎಂದರು.
ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ, ಗ್ರಾಪಂ ಸಿಬ್ಬಂದಿ ಇದ್ದರು.