ಜನರಲ್ಲಿ ಜಾಗೃತಿ ಮೂಡಿಸಲು ಸಲಹೆ

Sirigere Chandrappa 20 (1)
Published on

ಸಿರಿಗೆರೆ: ಆರೋಗ್ಯ ತಪಾಸಣೆಗೆ ಬರುವ ರೋಗಿಗಳಿಗೆ ಕರೊನಾ ವೈರಸ್ ಬಗ್ಗೆ ಅರಿವು ಮೂಡಿಸಿ ಎಂದು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಶಾಸಕ ಎಂ.ಚಂದ್ರಪ್ಪ ಸೂಚಿಸಿದರು.

ಸೋಮವಾರ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿ, ಚಿಕಿತ್ಸೆ ನೀಡುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಕೈಗವಸು ಮತ್ತು ಮಾಸ್ಕ್ ಕಡ್ಡಾಯವಾಗಿ ಬಳಸಬೇಕು. ಈ ಬಗ್ಗೆ ರೋಗಿಗಳಿಗೂ ಮಾಹಿತಿ ನೀಡಿ. ಎಲ್ಲೂ ಗುಂಪು ಸೇರದಂತೆ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.

ಗ್ರಾಪಂ ಪಿಡಿಒ ಲೋಕೇಶ್, ಜಿಪಂ ಮಾಜಿ ಉಪಾಧ್ಯಕ್ಷ ರಾಜಶೇಖರ್, ಸಿರಿಗೆರೆ ಮೋಹನ್, ಪ್ರಶಾಂತ್, ಫಾರ್ಮಸಿಸ್ಟ್ ಮೋಹನ್, ಬಸವರಾಜು ಮತ್ತು ಆಸ್ಪತ್ರೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net