ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ

Sirigere Helth camp
ಸಿರಿಗೇರಿಯಲ್ಲಿ ಏರ್ಪಡಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ ಸ್ತ್ರೀರೋಗ ತಜ್ಞೆ ಡಾ.ಪದ್ಮಿನಿ ಪ್ರಸಾದ್ ಮಾತನಾಡಿದರು. ಟಿಎಚ್‌ಒ ಈರಣ್ಣ, ಪ್ರಮುಖರಾದ ಸಿರಿಗೇರಿ ಯರಿಸ್ವಾಮಿ ಇದ್ದರು.
Published on

ಸಿರಿಗೇರಿ: ಕೆಲಸದ ಒತ್ತಡ ನಡುವೆಯೂ ನಮ್ಮ ಆರೋಗ್ಯದ ಬಗ್ಗೆ ಗಮನಹರಿಸಬೇಕು ಎಂದು ಸ್ತ್ರೀ ರೋಗ ತಜ್ಞೆ ಡಾ.ಪದ್ಮಿನಿ ಪ್ರಸಾದ್ ಹೇಳಿದರು.

ಇಲ್ಲಿನ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದ ಸಮುದಾಯ ಭವನದಲ್ಲಿ ಶರತ್ ಮೋರಿಯಲ್ ಫೌಂಡೇಷನ್ ಹಾಗೂ ಭರವಸೆ ಚಾರಿಟಬಲ್ ಫೌಂಡೇಷನ್ ಏರ್ಪಡಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ ಮಾತನಾಡಿದರು. ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಾಗಿದ್ದರೆ ದೈನಂದಿನ ಚಟುವಟಿಕೆಯಲ್ಲಿ ಉಲ್ಲಾಸದಿಂದ ತೊಡಗಿಕೊಳ್ಳಲು ಸಾಧ್ಯ. ಅದಕ್ಕಾಗಿ ಯೋಗ, ಧ್ಯಾನ, ಪ್ರಾಣಾಯಮ ರೂಢಿಸಿಕೊಳ್ಳಬೇಕು. ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.

ಮಹಿಳೆಯರು ಹೆಚ್ಚಾಗಿ ಆರೋಗ್ಯ ಸಮಸ್ಯೆ ಅನುಭವಿಸುತ್ತಿರುತ್ತಾರೆ. ಅದರಲ್ಲೂ ಗ್ರಾಮೀಣ ಮಹಿಳೆಯರು ಮುಕ್ತವಾಗಿ ತಪಾಸಣೆ ಮಾಡಿಸಿಕೊಳ್ಳಲು ಮುಜುಗರ ಪಡುತ್ತಾರೆ. ಅದಕ್ಕೆ ನಾನೇ ಗ್ರಾಮೀಣ ಪ್ರದೇಶಕ್ಕೆ ಬಂದಿದ್ದೇನೆ. ಸಿರಿಗೇರಿ ಯರಿಸ್ವಾಮಿ ಅವರು ಉಚಿತ ಆರೋಗ್ಯ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದರು. ಟಿಎಚ್‌ಒ ಈರಣ್ಣ ಮಾತನಾಡಿ, ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ. ಆರೋಗ್ಯವನ್ನು ಲೆಕ್ಕಿಸದೆ ಕುಟುಂಬಕ್ಕಾಗಿ ಶ್ರಮಿಸುತ್ತಾಳೆ. ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನಿಡಿದರು. ಸಿರಿಗೇರಿ ಯರಿಸ್ವಾಮಿ ಮಾತನಾಡಿದರು. 200ಕ್ಕೂ ಹೆಚ್ಚು ಮಹಿಳೆಯರು ತಪಾಸಣೆ ಮಾಡಿಸಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net