ಶಿರಸಿ ಬಂಡಲ ಬಳಿ ಭೀಕರ ರಸ್ತೆ ಅಪಘಾತ ಐವರು ಸಾವು

Vandal bus- car accident
Published on

ಶಿರಸಿ: ರಾಜ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಐವರು ಮೃತಪಟ್ಟ ಶಿರಸಿ ಕುಮಟಾ ಹೆದ್ದಾರಿ ಯ ಬಂಡಲದ ಸಮೀಪ ಶುಕ್ರವಾರ ನಡೆದಿದೆ.

ಶಿರಸಿಯಿಂದ ಕುಮಟಾ ಕಡೆಗೆ ಹೋಗುತ್ತಿದ್ದ ಎನ್ ಡಬ್ಲುಕೆಆರ್ ಟಿಸಿ ಬಸ್​​​​​ ಹಾಗೂ ಕುಮಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಬಂಡಲ ಪೆಟ್ರೊಲ್ ಪಂಪ್ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ‌. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾನೆ.

ಶಿರಸಿಯ ರಾಘವೇಂದ್ರ ಕಲ್ಯಾಣ ಮಂಟಪದ ಮದುವೆಗೆ ಆಗಮಿಸುತ್ತಿದ್ದ ಮಂಗಳೂರಿನ ರಾಮಕೃಷ್ಣ ಬಾಬುರಾವ್ (71), ವಿದ್ಯಾಲಕ್ಷ್ಮೀ ರಾಮಕೃಷ್ಣ(65), ಪುಷ್ಪಾ ಮೋಹನ ರಾವ್ (62), ಸುಹಾಸ್ ಗಣೇಶ ರಾವ್ (30), ಹಾಗೂ ಚೆನ್ನೈನ ಅರವಿಂದ (30)ಮೃತರು.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ಸಿನ ಚಾಲಕರು ಅಪಾಯದಿಂದ ಪಾರಾಗಿದ್ದಾರೆ. ಜೊತೆಗೆ ಬಸ್​ನಲ್ಲಿ 60ಕ್ಕೂ ಅಧಿಕ ಪ್ರಯಾಣಿಕರು ಇದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net