ವಿದ್ಯುತ್ ತಂತಿ ತಗುಲಿ ಚಿರತೆ ಸಾವು

18-SIRSI-3 CHITHA
Published on

ಶಿರಸಿ: ವಿದ್ಯುತ್ ತಂತಿ ತಗುಲಿ ಚಿರತೆ ಮೃತಪಟ್ಟ ಘಟನೆ ತಾಲೂಕಿನ ಕಾಗೇರಿ ಗ್ರಾಮದ ಸರ್ವೆ ನಂಬರ್ 160ರ ಬೆಟ್ಟದಲ್ಲಿ ಗುರುವಾರ ನಡೆದಿದೆ. ಸುಮಾರು 4 ವರ್ಷದ ಗಂಡು ಚಿರತೆ ವಿದ್ಯುತ್ ಕಂಬದ ಬುಡದಲ್ಲಿಯೇ ಸತ್ತು ಬಿದ್ದಿದೆ. ಈ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪಶು ವೈದ್ಯಾಧಿಕಾರಿ ಡಾ. ಪ್ರಶಾಂತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಡಿಎಫ್​ಒ ಡಾ. ಅಜ್ಜಯ್ಯ ಜೆ.ಆರ್., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್. ನಿಂಗಾಣಿ ಅವರ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಗಿರೀಶ ನಾಯ್ಕ ಹಾಗೂ ಸಿಬ್ಬಂದಿ ಚಿರತೆಯ ಅಂತ್ಯಕ್ರಿಯೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net