ಸಿರಗುಪ್ಪದ ಕರೊನಾ ಪ್ರತ್ಯೇಕ ಚಿಕಿತ್ಸಾ ಕೊಠಡಿಗೆ ಸಂಸದ ಕರಡಿ ಸಂಗಣ್ಣ ಭೇಟಿ, ಪರಿಶೀಲನೆ

Sanganna Visit Siriguppa Corona Ward
Published on

ಸಿರಗುಪ್ಪ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರೊನಾ ಸೋಂಕಿತರ ಚಿಕಿತ್ಸೆಗಾಗಿ ತೆರೆದಿರುವ ಪ್ರತ್ಯೇಕ ವಾರ್ಡ್‌ಗೆ ಸಂಸದ ಕರಡಿ ಸಂಗಣ್ಣ ಬುಧವಾರ ಭೇಟಿ ನೀಡಿ, ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ಮುಖ್ಯಂತ್ರಿಗಳ ಆದೇಶದ ಮೇರೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ಚಿಕಿತ್ಸಾ ಕೊಠಡಿ ಆರಂಭಿಸಿ 10 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಈ ಕೊಠಡಿ ಅತ್ಯಂತ ಸುರಕ್ಷಿತವಾಗಿದ್ದು, ವೆಂಟಿಲೇಟರ್ ಸೇರಿ ಮುಂಜಾಗ್ರತಾ ಕ್ರಮ ಹಾಗೂ ರೋಗಿಗಳಿಗೆ ಬೇಕಾದ ಎಲ್ಲ ಔಷಧಗಳ ವ್ಯವಸ್ಥೆ ಮಾಡಲಾಗಿದೆ. ವೈರಸ್ ಭೀತಿ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಕಟ್ಟುನಿಟ್ಟಾದ ಕ್ರಮಕ್ಕೆ ಆದೇಶ ನೀಡಿದ್ದು, ಕರೊನಾ ಸೋಂಕು ಹರಡದಂತೆ ಎಲ್ಲ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಶಾಸಕ ಎಂ.ಎಸ್.ಸೋಮಲಿಂಗಪ್ಪ , ತಹಸೀಲ್ದಾರ್ ಎಸ್.ಬಿ.ಕೂಡಲಗಿ, ತಾಲೂಕು ಆರೋಗ್ಯ ಅಧಿಕಾರಿ ಸುರೇಶಗೌಡ, ವೈದ್ಯರಾದ ಜಗನಾಥ, ಪ್ರಶಾಂತ, ಶಶಿಕುಮಾರ, ಆರೋಗ್ಯ ಸಹಾಯಕ ಗಿರೀಶ್ ಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net