ಸಿರಗುಪ್ಪ ತಾಲೂಕಿನಲ್ಲಿ ಹತ್ತಿ ಬೆಳೆ ಮಧ್ಯೆ ಗಾಂಜಾ ಬೆಳೆದಿದ್ದವನ ಬಂಧನ

170920 Siriguppa Cotton Crop Middel Ganja Crop
ಸಿರಗುಪ್ಪ ತಾಲೂಕಿನ ಅಗಸನೂರು ಗ್ರಾಮದಲ್ಲಿ ರೈತನೊಬ್ಬ ಹತ್ತಿ ಬೆಳೆ ಮಧ್ಯೆ ಬೆಳೆದ ಗಾಂಜಾ.
Published on

ಸಿರಗುಪ್ಪ: ತಾಲೂಕಿನ ಅಗಸನೂರು ಗ್ರಾಮದಲ್ಲಿ ರೈತನೊಬ್ಬ ಹತ್ತಿ ಬೆಳೆ ಮಧ್ಯೆ ಗಾಂಜಾ ಬೆಳೆದ ಹಿನ್ನೆಲೆಯಲ್ಲಿ ಬುಧವಾರ ಪೊಲೀಸರು ದಾಳಿ ನಡೆಸಿದರು. ತಿಪ್ಪೇ ರುದ್ರಪ್ಪ ಎಂಬಾತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಆತನಿಂದ 3.5 ಕೆ.ಜಿ. ಗಾಂಜಾ ಜಪ್ತಿ ಮಾಡಲಾಗಿದೆ. ಸಿಪಿಐ ಟಿ.ಆರ್.ಪವಾರ್, ಪಿಎಸ್‌ಐ ಗಂಗಪ್ಪ ಬುರ್ಲಿ ನೇತೃತ್ವದ ತಂಡ ದಾಳಿ ನಡೆಸಿತ್ತು. ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net