ಸಮಯಕ್ಕೆ ಸರಿಯಾಗಿ ವೇತನ ಕೊಡಿಸುವಂತೆ ಜಿಲ್ಲಾಧಿಕಾರಿಗೆ ಒತ್ತಾಯಿಸಿದ ಸಿರಗುಪ್ಪ ದಿನಗೂಲಿ ಪೌರಕಾರ್ಮಿಕರು

03012022 Siraguppa DC visit
Published on

ಸಿರಗುಪ್ಪ: ಸಮಯಕ್ಕೆ ಸರಿಯಾಗಿ ವೇತನ ಪಾವತಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿಗೆ ನಗರಸಭೆ ದಿನಗೂಲಿ ಪೌರಕಾರ್ಮಿಕರು ಸೋಮವಾರ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ ಮಾತನಾಡಿ, ನಿಮ್ಮ ಸರಿಯಾದ ಎಲ್ಲಾ ದಾಖಲೆಗಳನ್ನು ನಮ್ಮ ಕಚೇರಿಗೆ ಕಳುಹಿಸಿಕೊಡಿ. ಜತೆಗೆ ನನಗೆ ಒಂದು ತಿಂಗಳು ಕಾಲಾವಕಾಶ ಕೊಡಿ. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ತಿಂಗಳೊಳಗೆ ನಿಮಗೆ ವೇತನ ಪಾವತಿಯಾಗುವಂತೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ನಗರಸಭೆ ಅಧ್ಯಕ್ಷೆ ಕೆ.ಸುಶೀಲಮ್ಮ ಮಾತನಾಡಿ, ನಮ್ಮ ನಗರಸಭೆಯಲ್ಲಿ ಪೌರಕಾರ್ಮಿಕರ ಕೊರತೆ ಇದ್ದು, ನೇರ ನೇಮಕಾತಿಯ ಮೂಲಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ನಗರಸಭೆಗೆ ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಸರ್ಕಾರದಲ್ಲಿ ಯಾವುದೇ ಅವಕಾಶವಿಲ್ಲ. ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿದರು. ಶಾಸಕ ಎಂ.ಎಸ್.ಸೋಮಲಿಂಗಪ್ಪ ಮತ್ತು ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net