ಸಿರಗುಪ್ಪದಲ್ಲಿ 10ಕ್ಕೆ ಏರಿದ ಕರೊನಾ ಸೋಂಕಿತರ ಸಂಖ್ಯೆ

corona new
Published on

ಸಿರಗುಪ್ಪ: ನಗರದ 18ನೇ ವಾರ್ಡ್‌ನ 55ವರ್ಷದ ವ್ಯಕ್ತಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಮನೆ ಸೇರಿ 15 ಮನೆಗಳನ್ನು ಸೀಲ್‌ಡೌನ್ ಮಾಡಿ, 200 ಮೀಟರ್ ಬಫರ್ ಜೋನ್ ಮಾಡಲಾಗಿದೆ ಎಂದು ತಹಸೀಲ್ದಾರ್ ಎಸ್.ಬಿ.ಕೂಡಲಗಿ ತಿಳಿಸಿದರು.

ಸೋಂಕಿತ ವ್ಯಕ್ತಿಯು ಜೂ.17ನೇ ರಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದ, ಅಲ್ಲಿ ಗಂಟಲು ಮತ್ತು ಮೂಗಿನ ದ್ರವ ಪಡೆದು ಪರೀಕ್ಷೆಗೆ ಒಳಪಡಿಸಿ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಪ್ರಾಥಮಿಕ ಸಂಪರ್ಕದಲ್ಲಿ ನಾಲ್ಕು ಜನರಿದ್ದು, ಅವರನ್ನೂ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದರು.

ತಾಲೂಕಿನಲ್ಲಿ ಸದ್ಯ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮೂವರು ಚೇತರಿಸಿಕೊಂಡಿದ್ದು, ಏಳು ಪ್ರಕರಣ ಸಕ್ರೀಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿರಿಯ ಆರೋಗ್ಯ ಸಹಾಯಕ ಗಿರೀಶ್, ಪೊಲೀಸ್, ಆರೋಗ್ಯ ಸಿಬ್ಬಂದಿ ಹಾಗೂ ಕಂದಾಯ, ಆಶಾ, ಅಂಗನವಾಡಿ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net