ಸಿರಗುಪ್ಪ ತಾಲೂಕಿನ ತುಂಗಭದ್ರಾ ನದಿ ಪಾತ್ರದ ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಎಚ್ಚರಿಕೆ

07082020 Siraguppa Dangura
Published on

ಸಿರಗುಪ್ಪ: ಜಿಲ್ಲಾಧಿಕಾರಿ ನಿರ್ದೇಶನದಂತೆ ತಾಲೂಕಿನ ತುಂಗಭದ್ರಾ ನದಿ ಪಾತ್ರದ ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ನದಿಗೆ ಜನ ಜಾನುವಾರು ಬಿಡದಂತೆ ತಿಳಿಸಲಾಗಿದೆ ಎಂದು ತಹಸೀಲ್ದಾರ್ ಎಸ್.ಬಿ.ಕೂಡಲಗಿ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಅಣೆಕಟ್ಟೆ ಮೇಲ್ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದೆ. ಹೀಗಾಗಿ ಬಾಗೇವಾಡಿ, ಕೆಂಚನಗುಡ್ಡ, ಹೆರಕಲ್ಲು, ಉಡೇಗೋಳ, ಹಚ್ಚೊಳ್ಳಿ, ಶ್ರೀಧರಗಡ್ಡೆ ಸೇರಿ ಇತರ ಗ್ರಾಮಗಳ ಜನರಿಗೆ ಎಚ್ಚರಿಸಲಾಗಿದೆ. ಅಲ್ಲದೆ ಇದಕ್ಕಾಗಿ ನೋಡಲ್ ಅಧಿಕಾರಿ ನೇಮಿಸಿ 6 ಜನರ ತಂಡ ರಚಿಸಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net