ಸಿರವಾರ ಗ್ರಾಪಂಗೆ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ

Ravi Angadi Tashildar
ತಹಸೀಲ್ದಾರ್ ರವಿ ಎಸ್.ಅಂಗಡಿ
Published on

ಸಿರವಾರ: ವಿವಿಧ ಕಾರಣಗಳಿಂದ ತೆರವಾಗಿರುವ ತಾಲೂಕಿನ ವಿವಿಧ ಗ್ರಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ ಎಂದು ತಹಸೀಲ್ದಾರ್ ರವಿ ಎಸ್.ಅಂಗಡಿ ತಿಳಿಸಿದ್ದಾರೆ.

ಅತ್ತನೂರು, ಬಲ್ಲಟಗಿ, ಚಿಂಚರಕಿ ಗ್ರಾಪಂನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ.6 ರಂದು ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆ ಪ್ರಕಟಿಸುವರು. ನ.12 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ನ.13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.15 ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ನ.23 ರಂದು ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ. ಅವಶ್ಯವಿದ್ದರೆ ನ.25 ರಂದು ಮರು ಚುನಾವಣೆ ನಡೆಯಲಿದೆ. ನ.26 ರಂದು ಬೆಳಗ್ಗೆ 8 ರಿಂದ ಮತ ಎಣಿಕೆ ನಡೆಯಲಿದೆ ತಹಸೀಲ್ದಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net