ಕಾನೂನುಗಳು ಸಮರ್ಪಕ ಅನುಷ್ಠಾನವಾಗಲಿ

Untitled design (41)
ಚಿದಾನಂದ ಕರಿಗೂಳಿ
Published on

ಸಿರವಾರ: ಹುಬ್ಬಳ್ಳಿ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರ ಕೊಲೆ ಖಂಡನೀಯವಾಗಿದ್ದು, ಕೊಲೆಗಾರನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ ರಾಜ್ಯ ಸಮಿತಿ ಸದಸ್ಯ ಚಿದಾನಂದ ಕರಿಗೂಳಿ ಆಗ್ರಹಿಸಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿ, ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ, ರಕ್ಷಣೆ ಇಲ್ಲದೆ ಇರುವುದು ಇಂತಹ ಘಟನೆಗಳಿಗೆ ಕಾರಣವಾಗಿದೆ. ಇಂತಹ ಪ್ರಕರಣಗಳು ರಾಜ್ಯಾದ್ಯಂತ ನಡೆಯುತ್ತಿದ್ದು, ಸರ್ಕಾರ ಇವುಗಳ ಬಗ್ಗೆ ಗಮನ ನೀಡದೆ ಇರುವುದು ಇದಕ್ಕೆ ಕಾರಣವಾಗಿದೆ ಎಂದು ದೂರಿದರು.

ಸುಪ್ರೀಂಕೋರ್ಟ್ ನಿರ್ದೇಶನದಂತೆ ಶಾಲೆ- ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡಬೇಕು. ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಮಹಿಳೆಯರು ರಕ್ಷಣೆ ಹಾಗೂ ಭದ್ರತೆಗಾಗಿ ಇರುವ ಕಾನೂನುಗಳನ್ನು ಸಮರ್ಪಕವಾಗಿ ಜಾರಿಮಾಡಬೇಕೆಂದು ಚಿದಾನಂದ ಕರಿಗೂಳಿ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net