ಉನ್ನತ ಗುರಿಯೊಂದಿಗೆ ವಿದ್ಯಾಭ್ಯಾಸ ಮಾಡಿ

20022022 Sirwar Laptop distribution
Published on


ಶಾಸಕ ವೆಂಕಟಪ್ಪ ನಾಯಕ ಕಿವಿಮಾತು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ


ಸಿರವಾರ: ವಿದ್ಯಾರ್ಥಿ ಜೀವನದಲ್ಲಿ ಉನ್ನತ ಗುರಿಯೊಂದಿಗೆ ವಿದ್ಯಾಭ್ಯಾಸ ಮಾಡಿದರೆ ಯಶಸ್ವಿಯಾಗಲು ಸಾಧ್ಯ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶನಿವಾರ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಕರು ಹಾಕಿಕೊಟ್ಟ ದಾರಿಯಲ್ಲಿ ನಡೆದು ಎತ್ತರಕ್ಕೆ ಬೆಳೆಯಬೇಕು. ಈ ಮೂಲಕ ಊರಿಗೆ ಮತ್ತು ಶಿಕ್ಷಕರಿಗೆ ಗೌರವ ತರುವ ಕೆಲಸ ಮಾಡಬೇಕೆಂದರು. ಪಿಯು ಇಲಾಖೆ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಪ್ರಾಚಾರ್ಯ ಪಾಂಡು ನಾಯ್ಕ, ಪಪಂ ಮುಖ್ಯಾಧಿಕಾರಿ ಕೆ.ಮುನಿಸ್ವಾಮಿ, ಭೂದಾನಿ ನೀಲಮ್ಮ ಗೌಡಸಾನಿ ಮೊಮ್ಮಗಳು ಉಮಾದೇವಿ ಪಾಟೀಲ್, ಜಿಪಂ ಮಾಜಿ ಸದಸ್ಯ ಜೆ.ಶರಣಪ್ಪಗೌಡ, ಪಪಂ ಸದಸ್ಯ ಅಜಿತ್ ಕುಮಾರ್ ಹೊನ್ನಟಗಿ, ಜೆಡಿಎಸ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ನಗರ ಘಟಕದ ಅಧ್ಯಕ್ಷ ನಾಗರಾಜಗೌಡ, ಕಾರ್ಯದರ್ಶಿ ದಾನಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅಯ್ಯನಗೌಡ ಏರೆಡ್ಡಿ, ಪಿಯು ಕಾಲೇಜ್ ಪ್ರಾಚಾರ್ಯ ಅಮರೇಗೌಡ ಪಾಟೀಲ್, ಪ್ರೌಢಶಾಲೆ ಮುಖ್ಯಶಿಕ್ಷಕ ಸುರೇಶ.ಬಿ, ಉಪನ್ಯಾಸಕ ಕುಂಟೆಪ್ಪ ಗೌರಿಪುರ, ಮುಖಂಡ ಜಿ.ಲೋಕರೆಡ್ಡಿ ಇತರರು ಇದ್ದರು.’

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net