ಸಿರವಾರದಲ್ಲಿ ರಾಯಣ್ಣ ಭಾವಚಿತ್ರಕ್ಕೆ ಅಪಮಾನ

08 Sirwar 2
Published on

ಸಿರವಾರ: ಪಟ್ಟಣದ ರಾಯಚೂರು ಮಾರ್ಗದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ರಾಯಣ್ಣ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಂಗಳವಾರ ಚಪ್ಪಲಿ ಹಾರ ಹಾಕಿ ಅಪಮಾನಗೊಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಸಂಗೊಳ್ಳಿ ರಾಯಣ್ಣ ಅವರ ಅಭಿಮಾನಿಗಳು ಟೈರ್‌ಗೆ ಬೆಂಕಿ ಹಚ್ಚಿ ಸಂಚಾರ ತಡೆದು ಪ್ರತಿಭಟನೆ ನಡೆಸುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪಿಎಐ ಅಮರೇಗೌಡ ಆಗಮಿಸಿ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಪ್ರತಿಭಟನೆ ಕೈ ಬಿಡಲಾಯಿತು. ಪ್ರಮುಖರಾದ ತಾಯಣ್ಣ, ಚಂದ್ರು, ಮಾಳಿಂಗರಾಯ, ಹಾಲುಮತ ಸಮುದಾಯದ ಪ್ರಮುಖರು ಇದ್ದರು. ಘಟನೆ ಬಗ್ಗೆ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net