

ಬೆಂಗಳೂರು: ಪ್ರಕರಣವೊಂದರ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ( Munirathna ) ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇದೀಗ ಎಸ್ಐಟಿ ಅಧಿಕಾರಿಗಳು ( Sit Raid ) ಅವರ ಮನೆ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.
ಮೂರು ಕೇಸ್ಗಳ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸ್ತಿದ್ದಾರೆ. ಜೀವ ಬೆದರಿಕೆ, ಅತ್ಯಾ*ರ, ಜಾತಿ ನಿಂದನೆ ಪ್ರಕರಣಗಳು ಮುನಿರತ್ನ ವಿರುದ್ಧ ದಾಖಲಾಗಿವೆ.
ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ಪ್ರಕರಣಗಳ ಸಂಬಂಧ ದಾಖಲೆಗಳು, ಟೆಕ್ನಿಕಲ್ ಎವಿಡೆನ್ಸ್ಗಾಗಿ ಶೋಧಕಾರ್ಯ ನಡೆಸ್ತಿದ್ದಾರೆ.
ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್ಎಸ್ಎಲ್ ತಂಡದ ಜತೆಗೇ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.