ನೃಪತುಂಗ ಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕಾಗಿ ಸ್ಥಳ ಪರಿಶೀಲನೆ

Tenginakayi New
Published on

ಹುಬ್ಬಳ್ಳಿ : ಇಲ್ಲಿನ ನೃಪತುಂಗ ಬೆಟ್ಟದಲ್ಲಿ ರೋಪ್ ವೇ ನಿರ್ವಿುಸುವ ಮೂಲಕ ಪ್ರವಾಸಿ ತಾಣವನ್ನಾಗಿಸುವ ಉದ್ದೇಶದಿಂದ ಶಾಸಕ ಮಹೇಶ ಟೆಂಗಿನಕಾಯಿ ಅವರು ಪ್ರವಾಸೋದ್ಯಮ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರದಂದು ಸ್ಥಳ ಪರಿಶೀಲನೆ ನಡೆಸಿದರು.

ನೃಪತುಂಗ ಬೆಟ್ಟದಲ್ಲಿ ಪರಿಸರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು. ಈ ಭಾಗದಲ್ಲಿ ರೋಪ್ ವೇ ನಿರ್ವಿುಸಬೇಕೆಂಬುದು ಬಹುದಿನಗಳ ಆಶಯ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಅಗತ್ಯ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಶಾಸಕ ಮಹೇಶ ಟೆಂಗಿನಕಾಯಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಹು-ಧಾ ಸೆಂಟ್ರಲ್ ಕ್ಷೇತ್ರದಲ್ಲಿ ಹೊಸ ಹೊಸ ಬಡಾವಣೆಗಳು ಹೆಚ್ಚುತ್ತಿವೆ. ಹೆಚ್ಚುತ್ತಿರುವ ಜನಸಂಖ್ಯೆ, ಬಡಾವಣೆಗಳಿಗೆ ತಕ್ಕಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ಚಂದ್ರಮೌಳೇಶ್ವರ ದೇವಸ್ಥಾನ, ಉಣಕಲ್ ಕೆರೆಗಳನ್ನು ಸಹ ಪ್ರವಾಸಿ ತಾಣಗಳನ್ನಾಗಿಸಲು ಪ್ರಯತ್ನ ನಡೆಸಿದ್ದಾಗಿ ತಿಳಿಸಿದರು.

ರಾಜ್ಯ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳಾದ ರಿತಿಕಾ ವಮಾ, ಹೇಮಂತ ದೇಸಳ್ಳಿ, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ ಚೇತನ ಕ್ಯಾಸನೂರು, ವಲಯ ಅರಣ್ಯಾಧಿಕಾರಿ ಆರ್.ಎಸ್. ಉಪ್ಪಾರ, ಉಪ ವಲಯ ಅರಣ್ಯಾಧಿಕಾರಿ ಎಂ.ಎಸ್. ರಾಯನಗೌಡರ, ಪ್ರಮುಖರಾದ ಸಿದ್ದು ಮೊಗಲಿಶೆಟ್ಟರ, ವಿಶ್ವನಾಥ ಅಂಗಡಿ, ಚನ್ನು ಹೊಸಮನಿ, ಜೀವನ ವಸ್ತ್ರದ, ಸುದರ್ಶನ ದಿನೇಹಳ್ಳಿ, ವಿಜಯ ಬಾಕಳೆ ಹಾಗೂ ಇತರರು ಇರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net