ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

CDN PHOTO
ಚಡಚಣ ಪಟ್ಟಣದಲ್ಲಿ ನ್ಯಾಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಂ. ಐ. ಅರುಣ ಶನಿವಾರ ಪಟ್ಟಣಕ್ಕೆ ಭೇಟಿ ನೀಡಿ ಸರ್ಕಾರಿ ಜಾಗಗಳನ್ನು ಪರಿಶೀಲಿಸಿದರು. ನ್ಯಾಯಾಧೀಶರಾದ ಶಿವಾಜಿ ನಲವಡೆ , ಮಲ್ಲಿಕಾರ್ಜುನ ಅಂಬಲಿ, ಕೋಟ್ಯಪ್ಪ ಕಾಂಬಳೆ ಇದ್ದರು
Published on

ಚಡಚಣ: ಪಟ್ಟಣದಲ್ಲಿ ನ್ಯಾಯಾಲಯ ಆರಂಭಿಸಲು ರಾಜ್ಯ ಉಚ್ಚ ನ್ಯಾಯಾಲಯ ಹಸಿರು ನಿಶಾನೆ ತೋರಿದ ಹಿನ್ನೆಲೆಯಲ್ಲಿ ಶನಿವಾರ ನ್ಯಾಯಮೂರ್ತಿ ಎಂ.ಐ. ಅರುಣ ಭೇಟಿ ನೀಡಿ ವಿವಿಧ ಸರ್ಕಾರಿ ಜಾಗಗಳನ್ನು ಪರಿಶೀಲಿಸಿದರು.

ನ್ಯಾಯಾಲಯ ಕಟ್ಟಡ ಹಾಗೂ ನ್ಯಾಯಾಂಗ ಇಲಾಖೆಯ ಹಿರಿಯ ಅಧಿಕಾರಿಗಳ ವಸತಿ ಗೃಹಕ್ಕಾಗಿ ಪಪಂ ವ್ಯಾಪ್ತಿಯ ಸರ್ವೇ ನಂ. 361/ಬಿ ಯ 2 ಎಕರೆ 20 ಗುಂಟೆ ಹಾಗೂ ಸರ್ವೇ ನಂ. 208ರ 2 ಎಕರೆ 2 ಗುಂಟೆ ಸರ್ಕಾರಿ ಜಾಗಗಳನ್ನು ಪರಿಶೀಲಿಸಿದರು. ಬಳಿಕ ಸ್ಥಳದಲ್ಲಿದ್ದ ಇಂಡಿ ಎಸಿ ಅಬೀದ ಗದ್ಯಾಳ ಅವರಿಂದ ಜಾಗಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡರು.

ಇಲ್ಲಿ ನ್ಯಾಯಾಲಯ ಸ್ಥಾಪನೆ ಆಗಬೇಕೆಂಬುದು ಈ ಭಾಗದವರ ಬಹುದಿನದ ಬೇಡಿಕೆ ಆಗಿತ್ತು. ಕೆಲವು ವರ್ಷಗಳ ಹಿಂದೆ ಜಿಲ್ಲಾ ನ್ಯಾಯಾಧೀಶರು ಸ್ಥಳ ಪರಿಶೀಲಿಸಿ ವರದಿ ಸಲ್ಲಿಸಿದ್ದರಾದರೂ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು.

ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಶಿವಾಜಿ ನಲವಡೆ, ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶ ಮಲ್ಲಿಕಾರ್ಜುನ ಅಂಬಲಿ ಹಾಗೂ ಇಂಡಿ ನ್ಯಾಯಾಲಯದ ಹಿರಿಯ ದಿವಾಣಿ ನ್ಯಾಯಧೀಶ ಕೋಟ್ಯಪ್ಪ ಕಾಂಬಳೆ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net