ಮುಡಾರು ಪರಿಸರದಲ್ಲಿ ಸ್ಥಳ ಪರಿಶೀಲನೆ

sthala
Published on

ಕಾರ್ಕಳ: ಬೈಪಾಸ್ ಜಂಕ್ಷನ್‌ನಿಂದ ಬಜಗೋಳಿ ಮಾಳ ರಾಷ್ಟ್ರೀಯ ಹೆದ್ದಾರಿ 169ರ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಭೂಸ್ವಾಧೀನ ಪರಿಹಾರದ ಕುರಿತು ಶಾಸಕ ವಿ.ಸುನೀಲ್ ಕುಮಾರ್ ಮಾಳ ಹಾಗೂ ಮುಡಾರು ಪರಿಸರದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಭೂ ಮಾಲೀಕರೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಕಾರ್ಕಳ ಬೈಪಾಸ್‌ನಿಂದ ಮಾಳ ಗೇಟ್ ತನಕ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ಕೆಲವು ಕಡೆಗಳಲ್ಲಿ ಭೂಸ್ವಾಧೀನ ಹಾಗೂ ಪರಿಹಾರದ ಕುರಿತು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಭೂ ಮಾಲೀಕರ ಸಮಸ್ಯೆ ಆಲಿಸಿ, ಪರಿಹಾರ ವಿಷಯದಲ್ಲಿ ಆಗಿರುವ ನ್ಯೂನ್ಯತೆ ಸರಿಪಡಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಭೂ ಸ್ವಾಧೀನ ಅಧಿಕಾರಿ ಹಾಗೂ ಕುಂದಾಪುರ ಉಪವಿಭಾಗ ಸಹಾಯಕ ಕಮಿಷನರ್ ಕೆ.ಮಹೇಶ್ ಚಂದ್ರ, ಕಾರ್ಕಳ ತಹಸೀಲ್ದಾರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಭೂ ಮಾಲೀಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net