ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲನೆ

ಕರಾವಳಿ ಅಭಿವೃದ್ಧಿ ಮಂಡಳಿಯ ವತಿಯಿಂದ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷ ಎಂ.ಎ. ಗಫೂರ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕರಾವಳಿ ಅಭಿವೃದ್ಧಿ ಮಂಡಳಿಯ ವತಿಯಿಂದ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷ ಎಂ.ಎ. ಗಫೂರ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಕರಾವಳಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಎಂ.ಎ. ಗಫೂರ್‌
ಮಂಗಳೂರು: ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಕಾಮಗಾರಿಗಳನ್ನು ಆದ್ಯತೆಯೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿತ ಅಧಿಕಾರಿಗಳಿಗೆ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್‌ ನಿರ್ದೇಶನ ನೀಡಿದರು.
ಅವರು ಕರಾವಳಿ ಅಭಿವೃದ್ಧಿ ಮಂಡಳಿಯ ವತಿಯಿಂದ ನಡೆದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವಿವಿಧ ಅನುಷ್ಠಾನ ಸಂಸ್ಥೆಗಳೊಂದಿಗೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲನೆಯನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಪ್ರದೀಪ್‌ ಡಿಸೋಜಾ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಮಂಜುನಾಥ್‌ ಆರ್‌. ಶೆಟ್ಟಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶ್ರೀಧರ್‌, ಲೆಕ್ಕ ಪರಿಶೋಧನಾಧಿಕಾರಿ ಮೊಹಮ್ಮದ್‌ ತೌಸೀಫ್‌, ಮಂಡಳಿಯ ವಲಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಕರಾವಳಿ ಮೂರು ಜಿಲ್ಲೆಗಳ ವಿವಿಧ ಅನುಷ್ಠಾನ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net