ಪ್ರವಾಸಕ್ಕೆ ಬಂದು ಸಮುದ್ರ ಪಾಲಾಗುತ್ತಿದ್ದ ನಾಲ್ವರು ಮಕ್ಕಳು ಸೇರಿದಂತೆ 6 ಜನರ ರಕ್ಷಣೆ..

ydfdjfgsdhf
Published on

ಕಾರವಾರ: ಪ್ರವಾಸಕ್ಕೆ ಬಂದು ಸಮುದ್ರ ಪಾಲಾಗುತ್ತಿದ್ದವರನ್ನು ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ರಕ್ಷಿಸಿರುವ ಘಟನೆ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ನಡೆದಿದೆ.

ಹುಬ್ಬಳ್ಳಿಯಿಂದ ಪ್ರವಾಸಕ್ಕೆ ಆಗಮಿಸಿದ್ದ 13 ಮಂದಿ ಪೈಕಿ ಒಂದೇ ಕುಟುಂಬದ 4 ಮಕ್ಕಳು ಸೇರಿದಂತೆ ಒಟ್ಟು 6 ಜನರನ್ನು ರಕ್ಷಿಸಲಾಗಿದೆ. ವಾಟರ್ ಸ್ಪೋರ್ಟ್ಸ್ ಮುಗಿಸಿಕೊಂಡು ಕಡಲ ತೀರದಲ್ಲಿ ಆಟವಾಡುತ್ತಿದ್ದರು. ಈ ವೇಳೆ ವಾಟರ್​​ ಸ್ಪೋರ್ಟ್ಸ್ ಸಿಬ್ಬಂದಿ ಪಾಲಕರಿಗೆ ಮಕ್ಕಳನ್ನು ನೀರಿನಲ್ಲಿ ಮುಂದೆ ಹೋಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದರು.

ಆದರೂ ಮಕ್ಕಳು ಆಟವಾಡುತ್ತ ಮುಂದೆ ಸಾಗಿದ್ದು, ಒಮ್ಮೆಲೇ ಬಂದ ಅಲೆಯಿಂದ ಎಲ್ಲರೂ ಕೊಚ್ಚಿ ಹೋಗಿದ್ದಾರೆ. ತಕ್ಷಣ ಕುಟುಂಬಸ್ಥರು ಕೂಗಿಕೊಂಡಿದ್ದಾರೆ. ಬಳಿಕ ರಕ್ಷಣೆಗೆ ಧಾವಿಸಿದ ಲೈಫ್‌ಗಾರ್ಡ್, ಟೂರಿಸ್ಟ್ ಮಿತ್ರ ಸಿಬ್ಬಂದಿ 6 ಜನರನ್ನು ರಕ್ಷಣೆ ಮಾಡಿದ್ದಾರೆ. ಮಕ್ಕಳು ನೀರು ಕುಡಿದಿದ್ದರಿಂದ ಪ್ರಜ್ಞೆ ತಪ್ಪಿದ್ದರು. ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದರಿಂದ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net