ಎಸ್‌ಜೆಇಸಿ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ರನ್ನರ್ ಅಪ್

sssssssssss
Published on


ಮಂಗಳೂರು : ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ (ಎಸ್‌ಜೆಇಸಿ) ಪುರುಷರ ತಂಡ ಬೆಂಗಳೂರಿನ ನ್ಯೂ ಹೊರೈಜನ್ ಕಾಲೇಜ್ ಆಫ್ ಇಂಜಿನಿಯರಿಂಗ್‌ನಲ್ಲಿ ನಡೆದ ವಿಟಿಯು ಪುರುಷರ ರಾಜ್ಯ ಮಟ್ಟದ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ರನ್ನರ್ ಅಪ್ ಟ್ರೋಫಿ ಪಡೆದಿದೆ.
ಎಸ್‌ಜೆಇಸಿಯ ವಿದ್ಯಾರ್ಥಿ ಧವನ್ ರೈ 59 ಕೆ.ಜಿ.ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಹೃತಿಕ್‌ಚಂದ್ 120 ಕೆ.ಜಿ. ಕೆಳಗಿನ ವಿಭಾಗದಲ್ಲಿ ಚಿನ್ನದ ಪದಕ ಗೆದ್ದರು. ಕಾಲೇಜಿನ ಪಿಇಡಿ ವನೀಶಾ ವಿ ರಾಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಎಂ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net