ಸಚಿವ ಸತೀಶ್‌ ಜಾರಕಿಹೊಳಿ ನಿವಾಸಕ್ಕೆ ವಾಲ್ಮೀಕಿ ಶ್ರೀಗಳ ಭೇಟಿ

IMG-20250706-WA0011.jpg
Published on

ಬೆಳಗಾವಿ: ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ನಗರದ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ, ಸಚಿವರೊಂದಿಗೆ ಸಮಾಲೋಚನೆ ನಡೆಸಿದರು.

ತಮ್ಮ ನಿವಾಸಕ್ಕೆ ಆಗಮಿಸಿದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರನ್ನು ಸಚಿವ ಸತೀಶ್‌ ಜಾರಕಿಹೊಳಿ ಅವರು ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿದರು. ಈ ವೇಳೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಕೆಪಿವೈಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್‌ ಜಾರಕಿಹೊಳಿ ಅವರು ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net