

ವಿಜಯವಾಣಿ ಸುದ್ದಿಜಾಲ ವಿಜಯಪುರ
ಇಂದಿನ ಪೈಪೋಟಿ ಯುಗದಲ್ಲಿ ಶಿಕ್ಷಣದೊಂದಿಗೆ ಕೌಶಲಾಧಾರಿತ ಕಂಪ್ಯೂಟರ್ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಪ್ರಗತಿ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಎಸ್.ಕೃಪಾಶಂಕರ್ ಹೇಳಿದರು.
ಪಟ್ಟಣದ ಖಾಸಗಿ ಮಂಟಪದಲ್ಲಿ ಪ್ರಗತಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪ್ರಗತಿ ಸಂಯುಕ್ತ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಸ್ಕಿಲ್ ಅಕಾಡೆಮಿ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಕಾರ್ಯಕ್ರಮದಡಿ ಸಿಎ, ಸಿಪಿಟಿ, ಬ್ಯಾಂಕಿಂಗ್ ಪರೀಕ್ಷೆಗಳ ತರಗತಿ ನಡೆಸಲಾಗಿದೆ ಎಂದರು.
ಪ್ರಗತಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯೆ ಮಧು ಮಾತನಾಡಿ, ಪ್ರಗತಿ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಪೂರ್ವ ಶಿಕ್ಷಣದೊಂದಿಗೆ ಎಕ್ಸ್‌ಎಲ್, ಟ್ಯಾಲಿ, ಕಮ್ಯೂನಿಕೇಷನ್ ಸ್ಕಿಲ್ಸ್, ಪ್ರೋಫೆಷನಲ್ ಸ್ಕಿಲ್, ಬೇಸಿಕ್ ಕಂಪ್ಯೂಟರ್ ಶಿಕ್ಷಣ ನೀಡುತ್ತಿದ್ದು, ಅದರಲ್ಲಿ ತರಬೇತಿ ಪಡೆದವರಿಗೆ ಪ್ರಮಾಣಪತ್ರ ನೀಡಲಾಗುತ್ತಿದ್ದು, ತರಬೇತಿ ಪಡೆದವರಿಗೆ ಉತ್ತಮ ಭವಿಷ್ಯ ದೊರಕಿಸಿಕೊಟ್ಟಿದೆ ಎಂದರು.