

ವಿಜಯವಾಣಿ ಸುದ್ದಿಜಾಲ ಬೈಂದೂರು
ಸರ್ವಾಂಗೀಣ ಶಿಕ್ಷಣಕ್ಕೆ ಆದ್ಯತೆ ನೀಡುವುದು ನಮ್ಮ ಸಂಸ್ಥೆ ಆಶಯವಾಗಿದೆ. ಈ ನಿಟ್ಟಿನಲ್ಲಿ ಕೇವಲ ವಿದ್ಯಾರ್ಥಿಗಳಿಗೆ ವಾತ್ರವಲ್ಲ, ಶಿಕ್ಷಕರಿಗೂ ನಿರಂತರ ತರಬೇತಿ, ಕೌಶಲ್ಯ ಅಭಿವೃದ್ಧಿ ಬಗ್ಗೆ ಹಲವು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಹಾಗೂ ಕಾಲೇಜು ಮೇಲುಸ್ತುವಾರಿ ಸುರೇಂದ್ರ ಶೆಟ್ಟಿ ಹೇಳಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಾತನಾಡಿದರು.
ವ್ಯವಸ್ಥಾಪನಾ ಸಮಿತಿ ಸದಸ್ಯ ಆಲೂರು ರುರಾಮ ದೇವಾಡಿಗ ವಾತನಾಡಿ, ಆಧುನಿಕ ಶಿಕ್ಷಣದ ನ್ಯೂನತೆಗಳು ಈಗಾಗಲೇ ದೊಡ್ಡ ಸವಾಲಾಗಿ ನಮ್ಮ ಸವಾಜವನ್ನು ಕಾಡತೊಡಗಿದೆ. ಈ ದಿಸೆಯಲ್ಲಿ ನಾವು ಜಾಗೃತರಾಗದಿದ್ದರೆ ಭವಿಷ್ಯದಲ್ಲಿ ಭಾರಿ ಬೆಲೆ ತೆರಬೇಕಾಗಬಹುದು ಎಂದರು.
ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಲಿಂಗ ನಾಯ್ಕ ವಾತನಾಡಿದರು. ಹಳೇ ವಿದ್ಯಾರ್ಥಿಗಳಾದ ಗುರುರಾಜ್ ಪೂಜಾರಿ ಜಡ್ಡು, ಸುಟಿತ್ರಾ ಶೆಟ್ಟಿ ಚಿತ್ತೂರು, ಶ್ರುತಿ ತುಂಬ್ರಿ, ಶಶಾಂಕ ಶೆಟ್ಟಿ ನೀಡಿದ ಬೆಳ್ಳಿಯ ನಾಣ್ಯಗಳನ್ನು ಸನ್ಮಾನಿತ ವಿದ್ಯಾರ್ಥಿಗಳಿಗೆ ನೀಡಲಾಯಿತು.
ಪ್ರಾಂಶುಪಾಲ ಗೋಪಾಲಕೃಷ್ಣ ಜಿ.ಬಿ. ಸ್ವಾಗತಿಸಿದರು. ಉಪನ್ಯಾಸಕಿ ಜ್ಯೋತಿ ಎ. ಶೆಟ್ಟಿ ವಂದಿಸಿದರು. ಉಪನ್ಯಾಸಕ ಗೋಪಾಲ ದೇವಾಡಿಗ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಉಪನ್ಯಾಸಕಿ ಪೂರ್ಣಿವಾ ಎನ್.ಜೋಯಿಸ್ ನಿರೂಪಿಸಿದರು.