ಜೆಎಸ್'ಎಸ್ ಮಹಿಳಾ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Skill Development Workshop at JS's College for Women
Published on

ಮೈಸೂರು: ಸರಸ್ವತಿಪುರಂನ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಸೋಮವಾರ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಶ್ರೀ ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಸಂಸ್ಥೆ ಮುಖ್ಯಸ್ಥರಾದ ಶ್ರೀ ಸ್ವಾಮಿ ಮಹಾಮೇಧಾನಂದ ಮಾತನಾಡಿ, ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿ ಕಾರ್ಯಾಗಾರವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಕಾಲೇಜು ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸುತ್ತದೆ. ಅದನ್ನು ಬಳಸಿಕೊಳ್ಳುವ ಮನಸ್ಥಿತಿ ನಿಮ್ಮಲ್ಲಿ ಇರಬೇಕು ಎಂದು ಹೇಳಿದರು.

ಇನ್ಫೋಸಿಸ್ ಟೆಕ್ನಾಲಜಿ ಅನಲಿಸ್ಟ್ ಎಂ. ಸುಮಾ ಮಾತನಾಡಿ, ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಪಡೆದುಕೊಳ್ಳಬೇಕು. ಯಾವುದೇ ಉದ್ಯೋಗದ ಸಂದರ್ಭದಲ್ಲಿ ನಿಮ್ಮಲ್ಲಿರುವ ಸಂವಹನ ಕೌಶಲ್ಯ ಅತ್ಯಂತ ಮುಖ್ಯವಾಗುತ್ತದೆ ಎಂದರು. ವೇದಿಕೆಯಲ್ಲಿ ಪ್ರಾಂಶುಪಾಲರಾದ ಎಂ. ಪೂರ್ಣಿಮಾ, ಪ್ರಾಧ್ಯಾಪಕರಾದ ಡಾ.ಮಹದೇವಸ್ವಾಮಿ, ಕೆ. ಸಂತೋಷ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net