ನಿತ್ಯ ಅಭ್ಯಾಸದಿಂದ ಕೌಶಲ

ಕಂಪ್ಲಿಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟಕ್ಕೆ ನರೇಗಾ ಎಡಿ ಕೆ.ಎಸ್.ಮಲ್ಲನಗೌಡ ಚಾಲನೆ ನೀಡಿದರು. ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಹನುಮಂತಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಟಿ.ಎಂ.ಬಸವರಾಜ, ಸದಸ್ಯ ಸರ್ವೇಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಅಶೋಕರೆಡ್ಡಿ ಇತರರಿದ್ದರು.

Published on

ಕಂಪ್ಲಿ: ಮಕ್ಕಳು ನಿತ್ಯ ಅಭ್ಯಾಸ ಮಾಡಿದರೆ ಕ್ರೀಡಾ ಕೌಶಲ ಗಳಿಸಲು ಸಾಧ್ಯ ಎಂದು ತಾಪಂ ನರೇಗಾ ಎಡಿ ಕೆ.ಎಸ್.ಮಲ್ಲನಗೌಡ ಹೇಳಿದರು.

ನಗರದ ಷಾ.ಮಿಯಾಚಂದ್ ಸರ್ಕಾರಿ ಪಿಯು ಕಾಲೇಜು ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮಾತನಾಡಿದರು. ಕ್ರೀಡಾಭ್ಯಾಸದಿಂದ ಸದೃಢ ದೇಹ, ಉತ್ತಮ ಮನಸ್ಸು, ಬುದ್ಧಿ ಗಳಿಸಲು ಸಾಧ್ಯ ಎಂದರು.

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್.ದೊಡ್ಡಬಸಪ್ಪ ಮಾತನಾಡಿ, ವಲಯ ಮಟ್ಟದ ಕ್ರೀಡಾಕೂಟದಲ್ಲಿ 28ಪ್ರೌಢಶಾಲೆಗಳ 500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ವಿಜೇತರು ಆ.31ರಂದು ಬಳ್ಳಾರಿಯಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಲಿದ್ದಾರೆ ಎಂದು ತಿಳಿಸಿದರು.

ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಹನುಮಂತಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಟಿ.ಎಂ.ಬಸವರಾಜ, ಸದಸ್ಯ ಸರ್ವೇಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಅಶೋಕರೆಡ್ಡಿ, ಜಿಪಿಟಿ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ, ಖಾಸಗಿ ಶಾಲೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಉಗಾದಿ ಶಿವರಾಜ, ಇಸಿಒ ಎಂ.ರೇವಣ್ಣ, ಸಿಆರ್‌ಪಿಗಳಾದ ವೀರೇಶ, ಭೂಮೇಶ್ವರ, ರೇಣುಕಾರಾಧ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net