ಕೌಶಲ ತರಬೇತಿ ಕರಗತ ಮಾಡಿಕೊಳ್ಳಿ

kmp
ಕಂಪ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಪದವಿ ಅಂತಿಮ ವರ್ಷದ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
Published on

ಕಂಪ್ಲಿ: ಉನ್ನತ ಹುದ್ದೆ ಪಡೆಯಬೇಕಾದರೆ ಅದಕ್ಕೆ ತಕ್ಕ ಕೌಶಲ ತರಬೇತಿ ಕರಗತ ಮಾಡಿಕೊಳ್ಳಬೇಕು ಎಂದು ಪ್ರಭಾರ ಪ್ರಾಚಾರ್ಯ ಡಾ.ಜೆ.ಕೃಷ್ಣ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಂತರಿಕ ಗುಣಮಟ್ಟ ಭರವಸೆ ಕೋಶದಡಿ ಪ್ಲೇಸ್‌ಮೆಂಟ್ ಸೆಲ್ ಮತ್ತು ಹುಬ್ಬಳ್ಳಿಯ ದೇಶಪಾಂಡೆ ಫೌಂಡೇಷನ್ ಸಹಯೋಗದೊಂದಿಗೆ ಏರ್ಪಡಿಸಿದ್ದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ ಎದುರಿಸುವ ಮೂಲಕ ಉನ್ನತ ಹುದ್ದೆಗಳಿಸಲು ತರಬೇತಿ ಅಗತ್ಯ ಎಂದು ಸಲಹೆ ನೀಡಿದರು.

ಹುಬ್ಬಳ್ಳಿಯ ದೇಶಪಾಂಡೆ ಫೌಂಡೇಷನ್‌ನ ಬಳ್ಳಾರಿ ವಿಭಾಗದ ವ್ಯವಸ್ಥಾಪಕ ನಾಗರಾಜ ಅಂಗಡಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಪೂರ್ವತಯಾರಿ ಅಗತ್ಯ. ಸೂಕ್ತ ತರಬೇತಿ ಪಡೆದುಕೊಳ್ಳುವಲ್ಲಿ ಮುಂದಾಗಬೇಕು. ಪದವಿಯಲ್ಲಿ ಉತ್ತಮ ಅಂಕಗಳಿಸುವ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳಿಸುವ ಸಾಮರ್ಥ್ಯ ಗಳಿಸಬೇಕು ಎಂದರು. ಪ್ಲೇಸ್‌ಮೆಂಟ್ ಸೆಲ್ ಸಂಚಾಲಕಿ ಟಿ.ಎಂ.ಆರ್.ರಾಜ್ಮಾ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಜಿ.ಎಮ್.ಮಮತಾ, ಗ್ರಂಥಪಾಲಕ ಶ್ರೀ ಎ.ಜಿ.ವೀರಭದ್ರಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net