

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಹೇಮಾವತಿ ವೀ.ಹೆಗ್ಗಡೆಯವರ ಮತ್ತು ಹರ್ಷೇಂದ್ರ ಕುಮಾರ್ ಅವರ ನಿರ್ದೇಶನದಂತೆ ಚರ್ಮರೋಗ ತಪಾಸಣಾ ಶಿಬಿರ ನಡೆದಿದ್ದು, 200ಕ್ಕೂ ಅಧಿಕ ಮಂದಿ ಚರ್ಮರೋಗ ತಪಾಸಣಾ ಶಿಬಿರದಲ್ಲಿ ಭಾಗಿಯಾದರು.
ಈ ಶಿಬಿರದಲ್ಲಿ ಚರ್ಮದ ಕಲೆಗಳು, ಕಪ್ಪು ಕಲೆಗಳು, ಕೂದಲು ಉದುರುವಿಕೆ ಮತ್ತು ತಲೆಹೊಟ್ಟು, ಮಕ್ಕಳ ಚರ್ಮದ ತೊಂದರೆಗಳು, ಸೌಂದರ್ಯದ ಸಮಸ್ಯೆಗಳು, ಕುಷ್ಠ ರೋಗ ಸಮಸ್ಯೆ, ಗಾಯದ ಗುರುತುಗಳು, ಮೊಡವೆಗಳಿಗೆ ಚಿಕಿತ್ಸೆ, ಇಸುಬು, ಡ್ರಗ್‌ಅಲರ್ಜಿ, ಸೋರಿಯಾಸಿಸ್, ತೊನ್ನುರೋಗ (ಬಿಳಿ ಮಚ್ಚೆ), ತುರಿಕೆ ಕಜ್ಜಿ, ಉಗುರು ಸಂಬಂಧಿತ ರೋಗಗಳ ತಪಾಸಣೆಯನ್ನು ಉಚಿತವಾಗಿ ನಡೆಸಲಾಯಿತು.
ಚರ್ಮರೋಗ ತಜ್ಞರಾದ ಡಾ.ಭವಿಷ್ಯ ಕೆ.ಶೆಟ್ಟಿ ಶಿಬಿರ ಉದ್ಘಾಟಿಸಿ ರೋಗಿಗಳ ತಪಾಸಣೆ ನಡೆಸಿದರು. ರೋಗ ತಪಾಸಣೆ ಉಚಿತವಾಗಿತ್ತು. ಔಷಧದಲ್ಲಿ ಶೇ.10, ಲ್ಯಾಬ್‌ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ ಶೇ.20 ರಿಯಾಯಿತಿ ನೀಡಲಾಗಿತ್ತು.