ವಕೀಲರ ಸಂಘಕ್ಕೆ ಅವಿರೋಧ ಆಯ್ಕೆ

26 skpp 1
Published on

ಸಕಲೇಶಪುರ; ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ವಕೀಲ ಯಶವಂತ ಎರಡನೇ ಬಾರಿಗೆ ಅವಿರೋಧ ಆಯ್ಕೆಯಾಗಿದ್ದಾರೆ. ಜೆಎಂಎಫ್‌ಸಿ ನ್ಯಾಯಾಲಯದ ವಕೀಲರ ಸಂಘದ ಸಭಾಂಗಣದಲ್ಲಿ ಶುಕ್ರವಾರ ಆಯೋಜನೆಗೊಂಡಿದ್ದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾದ

ಕಾರಣ ಯಶವಂತ ಅವರನ್ನೇ ಅಧ್ಯಕ್ಷರನ್ನಾಗಿ ಘೋಷಿಸಲಾಯಿತು. ಇದೇ ಸಂದರ್ಭ ಕಾರ್ಯದರ್ಶಿಯಾಗಿ ವಾಣಿ ಉದಯ್, ಖಜಾಂಚಿಯಾಗಿ ಎ.ಪಿ ಮಹೇಶ್ ಹಾಗೂ ಸಹ ಕಾರ್ಯದರ್ಶಿಯಾಗಿ ವಿನಯ್ ಅವಿರೋಧ ಆಯ್ಕೆಯಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net