ವೃತ್ತಿಪರ ಸಂಘಟನೆಯಾಗಿದ್ದರೂ ಸಮಾಜಮುಖಿ ಚಿಂತನೆ : ಪದ್ಮರಾಜ್ ಬಲ್ಲಾಳ್ ಮೆಚ್ಚುಗೆ

02
Published on

ಬಂಟ್ವಾಳ: ಫೋಟೋಗ್ರಾಫರ್ಸ್‌ ಅಸೋಸಿಯೇಷನ್ ವೃತ್ತಿಪರ ಸಂಘಟನೆಯಾಗಿದ್ದರೂ ಸಮಾಜಮುಖಿ ಚಿಂತನೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಬಡವರ ಕಣ್ಣೀರೊರೆಸುವ ಕಾರ್ಯದ ಜತೆಗೆ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಸಂಘ ಮುಂದುವರಿಯುತ್ತಿರುವುದು ಅಭಿನಂದನೀಯ ಎಂದು ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೋಕ್ತೇಸರ ಪದ್ಮರಾಜ್ ಬಲ್ಲಾಳ್ ಹೇಳಿದರು.

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ- ಉಡುಪಿ ಇದರ ಬಂಟ್ವಾಳ ವಲಯದ ರಜತ ಮಹೋತ್ಸವ ವರ್ಷಾಚರಣೆ ಉದ್ಘಾಟಿಸಿ ಮಾತನಾಡಿದರು.

ಮಾವಂತೂರು ಶ್ರೀ ಬಲವಂಡಿ ಕ್ಷೇತ್ರದ ಗಡಿ ಪ್ರಧಾನ ದುರ್ಗಾದಾಸ್ ಶೆಟ್ಟಿ ಮಾವಂತೂರು ರಜತ ಲಾಂಛನ ಅನಾವರಣಗೊಳಿಸಿದರು. ಬಂಟ್ವಾಳ ವಲಯ ಅಧ್ಯಕ್ಷ ಕಿಶೋರ್ ಎಸ್.ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎಸ್‌ಕೆಪಿಎ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್, ರೋಟರಿ ಕ್ಲಬ್ ಮಾಜಿ ಜಿಲ್ಲಾ ಸಹಾಯಕ ಗವರ್ನರ್ ರಾಘವೇಂದ್ರ ಭಟ್, ಜಿಲ್ಲಾ ಸಂಚಾಲಕ ಕರುಣಾಕರ ಕಾನಂಗಿ, ಎಸ್‌ಕೆಪಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ವಾಸುದೇವ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಬಂಟ್ವಾಳ ವಲಯ ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ, ಕೋಶಾಧಿಕಾರಿ ವರುಣ್ ಕಲ್ಲಡ್ಕ ಉಪಸ್ಥಿತರಿದ್ದರು.

ಎಸ್‌ಕೆಪಿಎ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷ ಆನಂದ ಎನ್. ಸ್ವಾಗತಿಸಿದರು. ಗೌರವಾಧ್ಯಕ್ಷ ಹರೀಶ್ ಕುಂದರ್ ವಂದಿಸಿದರು. ಸದಸ್ಯ ರಾಜೇಂದ್ರ ಕೆ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net