

ಮಂಗಳೂರು: ಎಸ್ಕೆಎಸ್ಸೆಎಸ್ಸೆಫ್ ಅಬುಧಾಬಿ ಕರ್ನಾಟಕ ಮತ್ತು ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕ ಜಂಟಿ ಆಶ್ರಯದಲ್ಲಿ ಬೃಹತ್ ಮೀಲಾದ್ ಕಾನ್ಫರೆನ್ಸ್ ಪ್ರಚಾರಾರ್ಥ ಅಬುಧಾಬಿಯಲ್ಲಿ ಮೂರನೇ ಬಾರಿ ರಕ್ತದಾನ ಶಿಬಿರ ಶುಕ್ರವಾರ ನಡೆಯಿತು.
ರಕ್ತದಾನ ಶಿಬಿರದಲ್ಲಿ ಒಟ್ಟು 74 ಮಂದಿ ರಕ್ತದಾನ ಮಾಡಿದರು. ಇದರಲ್ಲಿ 7 ಮಂದಿ ಸಿಂಗಲ್ ಡೋನರ್ ಪ್ಲೇಟ್ಲೆಟ್ಸ್ ದಾನ ಮಾಡಿದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಅಬುಧಾಬಿ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.
ಸಂಜೆ ಉಸ್ತಾದ್ ಶಹೀರ್ ಹುದವಿ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಅಬುಧಾಬಿ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ, ಯುಎಇ ಆಡಳಿತಾಧಿಕಾರಿ ಶೇಕ್ ಮುಹಮ್ಮದ್ ಬಿನ್ ಝಾಯೆದ್‌ಗೆ ಕೃತಜ್ಞತೆ ಸಲ್ಲಿಸಿದರು.
ಅಬುಧಾಬಿ ಸುನ್ನಿ ಸೆಂಟರ್ ಅಧ್ಯಕ್ಷ ಅಸ್ಸಯ್ಯದ್ ಅಬ್ದುಲ್ ರಹ್ಮಾನ್ ತಂಙಳ್ ಪ್ರಾಸ್ತಾವಿಕ ಮಾತನಾಡಿದರು.
ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕದ ವ್ಯವಸ್ಥಾಪಕ ಸಿರಾಜುದ್ದೀನ್ ಪರ್ಲಡ್ಕ ಹಾಗೂ ಎಸ್.ಕೆ.ಎಸ್.ಎಸ್.ಎಫ್ ಅಬುಧಾಬಿ ಕರ್ನಾಟಕದ ಗೌರವಾಧ್ಯಕ್ಷ ಹನೀಫ್ ಅರಿಯಮೂಲೆ ಉಪಸ್ಥಿತರಿದ್ದರು.
ಉದ್ಯಮಿಗಳಾದ ಮುಹಮ್ಮದ್ ಹಾಜಿ, ಅನ್ಸಾರ್ ಬೆಳ್ಳಾರೆ ಶುಭ ಹಾರೈಸಿದರು.
ಶಿಬಿರದಲ್ಲಿ ಬ್ಲಡ್ ಹೆಲ್ಪ್‌ಲೈನ್ ಕರ್ನಾಟಕದ ಕಾರ್ಯ ನಿರ್ವಾಹಕರಾದ ಮೆಹತಾಬ್ ಕೈಕಂಬ, ಯಾಕೂಬ್ ಫೈರೋಝ್, ಎಸ್.ಕೆ.ಎಸ್.ಎಸ್.ಎಫ್ ಅಬುಧಾಬಿ ಕರ್ನಾಟಕದ ಪ್ರಮುಖರಾದ ಶಾಫಿ ಹಾಜಿ ಪೆರುವಾಯಿ, ಅಬೂಬಕ್ಕರ್ ಸಕಲೇಶಪುರ ಮತ್ತು ದಾರುಲ್ ಹಸನಿಯ್ಯ ಅಬುಧಾಬಿ ಸಮಿತಿ ಅಧ್ಯಕ್ಷ ಶಾಕಿರ್ ಕೂರ್ನಡ್ಕ , ರಕ್ತದಾನ ಶಿಬಿರದ ಉಸ್ತುವಾರಿಗಳಾದ ಹಮೀದ್ ಸವಣೂರು, ಹಂಝ ನಾಳ, ತಸ್ಲೀಮ್ , ಎಸ್‌ಕೆಎಸ್‌ಎಸ್‌ಎಫ್ ಕಾರ್ಯಕರ್ತರಾದ ಹಿದಾಯತ್ ರಹ್ಮಾನ್ ಮರ್ವೆಲ್ , ತ್ವಾಹ ಉಪ್ಪಿನಂಗಡಿ, ಜೌಹರ್ ಕನ್ನಡಿಕಟ್ಟೆ , ಹಫೀಝ್, ಶಾಫಿ ಕಿನ್ಯಾ, ಸಫ್ವಾನ್ ಮತ್ತು ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು. ಯಹ್ಯಾ ಕೊಡ್ಲಿಪೇಟೆ ಸ್ವಾಗತಿಸಿದರು. ಏಈ ಅಬುಧಾಬಿ ಕರ್ನಾಟಕ ಸಮಿತಿಯ ಉಪಾಧ್ಯಕ್ಷರಾದ ಹಾಫಿಳ್ ಝೈನ್ ಸಖಾಫಿ ಕಾರ್ಯಕ್ರಮ ನಿರೂಪಿಸಿದರು. ಹಸನ್ ದಾರಿಮಿ ಉಸ್ತಾದ್ ವಂದಿಸಿದರು.