

ಮಡಿಕೇರಿ:
1965ರಲ್ಲಿ ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಬಲಿದಾನಗೈದ ಕೊಡಗಿನ ವೀರ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆಯ ಸ್ಕೈ ಫೋರ್ಸ್ ಬಾಲಿವುಡ್ ಸಿನಿಮಾ ಜ.24 ರಂದು ಬಿಡುಗಡೆಯಾಗುತ್ತಿದೆ. ಬೊಳ್ಳಜಿರ ಬಿ.ಅಯ್ಯಪ್ಪ ನೇತೃತ್ವದ ಕೊಡವ ಮಕ್ಕಡ ಕೂಟ ಹೊರತಂದಿರುವ, ಐತಿಚಂಡ ರಮೇಶ್ ಉತ್ತಪ್ಪ ಬರೆದಿರುವ "1965ರ ಯುದ್ಧ ಹಾಗೂ ಮಹಾವೀರ ಚಕ್ರ ಪುರಸ್ಕೃತ ಸ್ಕಾ÷್ವ.ಲೀ ಅಜ್ಜಮಾಡ ಬಿ.ದೇವಯ್ಯ ಅವರ ಜೀವನಾಧರಿತÀ ಪುಸ್ತಕವನ್ನು ಆಧರಿಸಿ ಸ್ಕೈ ಫೋರ್ಸ್ ಚಿತ್ರ ತಯಾರಿಸಲಾಗಿದೆ.
ಮ್ಯಾಡಾಕ್ ಫಿಲ್ಮ್÷್ಸ ಮತ್ತು ಜಿಯೋ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ದಿನೇಶ್ ವಿಜನ್, ಅಮರ್ ಕೌಶಿಕ್ ಹಾಗೂ ಜ್ಯೋತಿ ದೇಶಪಾಂಡೆ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಸಂದೀಪ್ ಕೇವಾಲಾನಿ ಹಾಗೂ ಅಭಿಷೇಕ್ ಅನಿಲ್ ಕಪೂರ್ ಜಂಟಿಯಾಗಿ ಸಿನಿಮಾ ನಿರ್ದೇಶಿಸಿದ್ದಾರೆ. ಅಕ್ಷಯ್ ಕುಮಾರ್ ಹಾಗೂ ವೀರ್ ಪಹಾಡಿಯಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸಾರಾ ಅಲಿ ಖಾನ್, ನಿಮ್ರತ್ ಕೌರ್ ಮತ್ತು ಶರದ್ ಕೇಳ್ಕರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಚಿತ್ರ ಜ.24ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಟ್ರೆöÊಲರ್ ಬಿಡುಗಡೆಯಾಗಿ ದೇಶಪ್ರೇಮದ ಕಿಚ್ಚನ್ನು ಹಚ್ಚಿದೆ.
1965ರ ಭಾರತ-ಪಾಕ್ ಯುದ್ಧದಲ್ಲಿ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಬದುಕಿ ಹಿಂದಕ್ಕೆ ಬರುವ ಅವಕಾಶಗಳಿತ್ತು. ಆದರೆ, ಈ ಅವಕಾಶವನ್ನು ಕೈಬಿಟ್ಟು ಶತ್ರು ರಾಷ್ಟç ಪಾಕ್‌ನ ಅತ್ಯಾಧುನಿಕ ಯುದ್ಧವಿಮಾನವನ್ನು ಕೆಚ್ಚೆದೆಯ ಸಾಹಸದ ಮೂಲಕ ಹೊಡೆದುರುಳಿಸಿ ಹುತಾತ್ಮರಾದರು. ಅವರ ಈ ಮಹಾನ್ ಬಲಿದಾನ ಹಲವಾರು ವರ್ಷಗಳ ಬಳಿಕ ಪಾಕ್ ಸೇನೆಯ ಅಧಿಕಾರಿಯೊಬ್ಬರನ್ನು ಬಿಬಿಸಿಯವರು ಸಂದರ್ಶನ ಮಾಡಿದ ಸಂದರ್ಭ ಬೆಳಕಿಗೆ ಬಂದಿತು. ಶೌರ್ಯ ಮೆರೆದು ಹುತಾತ್ಮರಾದ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರಿಗೆ ಮರಣೋತ್ತರವಾಗಿ ಮಹಾವೀರ ಚಕ್ರ ಪುರಸ್ಕಾರ ನೀಡಲಾಯಿತು. ಇವರ ಸಾಹಸಗಾಥೆಯನ್ನು ಐತಿಚಂಡ ರಮೇಶ್ ಉತ್ತಪ್ಪ ತಮ್ಮ ಪುಸ್ತಕದಲ್ಲಿ ಚಿತ್ರಿಸಿದ್ದಾರೆ.