ಜೀತ ಪದ್ಧತಿ ನಿಷೇಧ ಕಾರ್ಯಗಾರ ಇಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜೀತ ಪದ್ಧತಿ ನಿರ್ಮೂಲನ ದಿನ ನಿಮಿತ್ತ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ, ಸಂಸ್ಥೆಗಳ ಆಶ್ರಯದಲ್ಲಿ ಜೀತ ಪದ್ಧತಿ ನಿಷೇಧ ಕಾರ್ಯಗಾರವನ್ನು ಫೆ. 18ರಂದು ಮಧ್ಯಾಹ್ನ 12 ಗಂಟೆಗೆ ಜಿಪಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರುಶುರಾಮ ದೊಡ್ಡಮನಿ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಜಿಪಂ ಸಿಇಒ ಭುವನೇಶ ಪಾಟೀಲ, ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಆಗಮಿಸುವರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅಧ್ಯಕ್ಷತೆ ವಹಿಸುವರು.

ಜೀತ ಪದ್ಧತಿ ನಿಷೇಧ ಕಾರ್ಯಾಗಾರದಲ್ಲಿ ಮುಕ್ತಿ ಅಲಯನ್ಸ್​ ಕರ್ನಾಟಕದ ಶಲಿರ್ನ್​ ಆ್ಯಂಟೋನಿ ಮತ್ತು ಧಾರವಾಡ ಕಿಡ್ಸ್​ ಸೇವಾ ಸಂಸ್ಥೆ ನಿರ್ದೇಶಕ ಅಶೋಕ ಯರಗಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ತರಬೇತಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net