ಜೂನ್‌ ಅಂತ್ಯದೊಳಗೆ ಆಡಳಿತಕ್ಕೆ ಚುರುಕು: ಸಚಿವ ಸತೀಶ್‌ ಜಾರಕಿಹೊಳಿ

20240615_134527.jpg
Published on

ರೈತರಿಗೆ ಮನವರಿಕೆ ಮಾಡಿದರೆ ಮಾತ್ರ ಹೊಸ ಲೆವೋಟ್ ಮಾಡಲು ಸಾಧ್ಯ

ಬೆಳಗಾವಿ: ಜೂನ್‌ ಅಂತ್ಯದೊಳಗೆ ಮಹಾನಗರ ಪಾಲಿಕೆ, ಕೆಡಿಪಿ ಸೇರಿದಂತೆ ಪ್ರತಿ ಇಲಾಖೆಗಳ ಸಭೆಗಳನ್ನು ನಡೆಸಿ ಆಡಳಿತ ಚುರುಕುಗೊಳಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.

ನಗರದ ಬೂಡಾ ಕಚೇರಿ ಸಭಾಂಗಣದಲ್ಲಿ‌ ನಡೆದ ಸಾಮಾನ್ಯ ಸಭೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಿಂದ ಆಡಳಿತ ನಿಧಾನವಾಗಿತ್ತು. ಹೊಸ ಕಾಮಗಾರಿಗಳ ಆರಂಭಕ್ಕಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಶೀಘ್ರವೇ ಹೊಸ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net