ಕೂಡಲಸಂಗಮ ಬಳಿ ಕಿರು ವಿಮಾನ ನಿಲ್ದಾಣ

Small airport near Kudalasangama
Small airport near Kudalasangama
Published on

ಹುನಗುಂದ: ತಾಲೂಕಿನ ಕೂಡಲಸಂಗಮ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟನೆಯಿಂದ ಅಪಘಾತಗಳು ಹೆಚ್ಚಾಗಿದ್ದು, ಸ್ಥಳೀಯರ ಬೇಡಿಕೆಯಂತೆ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ತಾಲೂಕಿನ ಕೂಡಲಸಂಗಮ ಕ್ರಾಸ್ ಬಳಿ ಮಂಗಳವಾರ ವಿಜಯಪುರ-ಹುನಗುಂದ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ತಾಲೂಕಿನ ಕೂಡಲಸಂಗಮ ಪವಿತ್ರ ಕೇಂದ್ರವಾಗಿದ್ದು, ನಿತ್ಯ ಸಾವಿರಾರು ಜನರು ಆಗಮಿಸುವರು. ಹೀಗಾಗಿ ಒಂದು ಕಿರು ವಿಮಾನ ನಿಲ್ದಾಣಕ್ಕೆ ಭೂಮಿಯನ್ನು ಕೊಡಿಸುವುದಾಗಿ ತಿಳಿಸಿದರು.

ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾದ ಕೂಡಲಸಂಗಮ-ಹೊಸಪೇಟೆ ರೈಲ್ವೆ ಮಾರ್ಗವನ್ನು ಅನುಷ್ಠಾನಗೊಳಿಸಬೇಕು ಎಂದು ಪಿ.ಸಿ. ಗದ್ದಿಗೌಡರ ಅವರಲ್ಲಿ ಮನವಿ ಮಾಡಿಕೊಂಡರು.

ಲೋಕಸಭಾ ಸದಸ್ಯ ಪಿ.ಸಿ. ಗದ್ದಿಗೌಡರ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿಗಳ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ನನ್ನ ಲೋಕಸಭಾ ಕ್ಷೇತ್ರದ ವಾಪ್ತಿಯಲ್ಲಿ ಹೈದ್ರಾಬಾದ್-ಪಣಜಿ, ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತೀವ್ರಗತಿಯಲ್ಲಿ ಸಾಗಿದೆ. ಜತಗೆ ಬಾಣಪುರ- ಶಿರೂರು ಅಗಲೀಕರಣ ಬಹುತೇಕ ಮುಗಿದಿದೆ ಎಂದರು.

ಮುಖಂಡರಾದ ಗಂಗಾಧರ ದೊಡ್ಡಮನಿ, ಬಸವರಾಜ ಬಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net