ಕನ್ಯಾಡಿ ಸರ್ಕಾರಿ ಶಾಲೆಗೆ ಸ್ಮಾರ್ಟ್ ಕ್ಲಾಸ್

smart class
Published on

ಬೆಳ್ತಂಗಡಿ: ಹಿಂದು ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್ ಬೈಟ್ ಐಟಿ ಕಂಪನಿಯ ಪ್ರಕಾಶ್ ರಾವ್ ಅವರು ನೀಡಿದ 1.65 ಲಕ್ಷ ರೂ.ವೆಚ್ಚದ ಸ್ಮಾರ್ಟ್ ಕ್ಲಾಸ್‌ನ್ನು ಕನ್ಯಾಡಿಯ ಸರ್ಕಾರಿ ಶಾಲೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹಸ್ತಾಂತರಿಸಿದರು.

ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷ ಪೂರಣ್ ವರ್ಮಾ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಅವಿನಾಶ್ ಶೆಟ್ಟಿ,ಹಿಂದು ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ರಾಜೇಶ್ ರಾವ್, ಇಸ್ರೋ ಹಿರಿಯ ವಿಜ್ಞಾನಿ ವಾಸುದೇವ್ ರಾವ್ ಪಿ., ಅಗ್ರಿ ಲೀಫ್ ಸಂಸ್ಥೆಯ ನಿರ್ದೇಶಕ ಅವಿನಾಶ್ ರಾವ್, ಬ್ಯಾಂಕ್ ಆಫ್ ಬರೋಡ, ನೂಜಿಬಾಳ್ತಿಲ ಶಾಖಾ ವ್ಯವಸ್ಥಾಪಕರು, ಶಿವಪ್ರಸಾದ್ ಸುರ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಂದ ಭಟ್ ಕೆ., ಮುಖ್ಯಶಿಕ್ಷಕಿ ಪುಷ್ಪ್ಪಾ ಎನ್.ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net