ಸಹ್ಯಾದ್ರಿಯಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022

MNG-August 25-Sahyadri 2
Published on

ಮಂಗಳೂರು: ಶಿಕ್ಷಣ ಸಚಿವಾಲಯದ ಇನ್ನೋವೇಶನ್ ಸೆಲ್ ಮತ್ತು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (ಎಐಸಿಟಿಇ) ಸಹಯೋಗದಲ್ಲಿ ಸಹ್ಯಾದ್ರಿ ಕಾಲೇಜಿನಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2022ಕ್ಕೆ ಚಾಲನೆ ನೀಡಲಾಯಿತು.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಕರಿಸಿದ್ದಪ್ಪ ಉದ್ಘಾಟಿಸಿ, ಯುವ ಸಮುದಾಯ ದೇಶದಲ್ಲಿ ಹೊಸ ಬದಲಾವಣೆ ಸೃಷ್ಟಿಸಿದೆ ಎಂದರು.
ವಿಧಾನ ಪರಿಷತ್ ಸದಸ್ಯ, ಭಂಡಾರಿ ಫೌಂಡೇಶನ್ ಅಧ್ಯಕ್ಷ ಮಂಜುನಾಥ ಭಂಡಾರಿ, ಎಸ್‌ಕೆಡಿಆರ್‌ಡಿಪಿ ಬಿಸಿ ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಉಪಸ್ಥಿತರಿದ್ದರು.
ಸ್ಥಳೀಯ ಉದ್ಘಾಟನೆಯ ನಂತರ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಗ್ರ್ಯಾಂಡ್ ಫಿನಾಲೆಗೆ ಉದ್ಘಾಟನೆ ನೆರವೇರಿತು. ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್, ಪತ್ನಿ ಪರಿಮಳಾ ಜಗ್ಗೇಶ್ ಕ್ಯಾಂಪಸ್‌ಗೆ ಭೇಟಿ ನೀಡಿ ಭಾಗವಹಿಸಿದವರಿಗೆ ಶುಭ ಹಾರೈಸಿದರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಹಾಯಕ ಮಹಾ ಪ್ರಬಂಧಕ ಸದಾನಂದ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ದೇಶಾದ್ಯಂತದ ವಿವಿಧ ಕಾಲೇಜುಗಳ ಸುಮಾರು 200 ವಿದ್ಯಾರ್ಥಿಗಳು ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಎರಡು ದಿನಗಳ ಕಾಲ ಹ್ಯಾಕಥಾನ್ ಗ್ರ್ಯಾಂಡ್ ಫಿನಾಲೆಯಲ್ಲಿ ಭಾಗವಹಿಸುತ್ತಿದ್ದು, ಗ್ರಾಮೀಣಾಭಿವೃದ್ಧಿ ಸಚಿವಾಲಯ ಪಟ್ಟಿ ಮಾಡಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಪ್ರಯತ್ನ ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net