* ಲೀಲಾವತಿ ಅಭಿಮತ ಬೆಕ್ಕರೆ ದೇವಾಲಯ ನಿರ್ಮಾಣಕ್ಕೆ ನಿಧಿ ಹಸ್ತಾಂತರಿಸಿ

13BTP01
Published on

ಬೆಟ್ಟದಪುರ: ದೇವಾಲಯ ನಿರ್ಮಾಣದಿಂದ ನಾವೆಲ್ಲರೂ ಒಂದೇ ಎಂಬ ಭಾವೈಕ್ಯ ಮೂಡುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ತಿಳಿಸಿದರು.

ಬೆಟ್ಟದಪುರದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಕಚೇರಿವತಿಯಿಂದ ಸಮೀಪದ ಬೆಕ್ಕರೆ ಗ್ರಾಮದ ಶ್ರೀ ಲಕ್ಷ್ಮಿ ೀ ವೆಂಕಟೇಶ್ವರ ದೇವಾಲಯ ನಿರ್ಮಾಣಕ್ಕೆ ಮಂಜೂರಾದ 1 ಲಕ್ಷ ರೂ.ನಿಧಿ ಡಿಡಿ ಹಸ್ತಾಂತರಿಸಿ ಅವರು ಮಾತನಾಡಿದರು.

ಸಂಸ್ಥೆ ವತಿಯಿಂದ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳಿಗೆ ಕೈಲಾದ ನೆರವು ನೀಡಲಾಗುತ್ತಿದೆ. ಪಿರಿಯಾಪಟ್ಟಣ ತಾಲೂಕಿನಾದ್ಯಂತ ಹಲವು ದೇವಾಲಯಗಳ ಜೀರ್ಣೋದ್ಧಾರ ಸೇರಿದಂತೆ ಸಮುದಾಯ ಭವನ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ನಮ್ಮ ಸಂಸ್ಥೆ ಧನ ಸಹಾಯ ನೀಡಿದೆ. ಸಮುದಾಯ ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ವಲಯದ ಮೇಲ್ವಿಚಾರಕ ಹೇಮಂತ, ಸೇವಾ ಪ್ರತಿನಿಧಿ ರೇಖಾ, ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಸ್ವಸಹಾಯ ಸಂಘ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net