ಸೋಮವಾರಪೇಟೆ: ಪಟ್ಟಣದ ಬ್ರಾಹ್ಮಣ ಸಮಾಜದ ವತಿಯಿಂದ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಶರನ್ನವರಾತ್ರಿ ಉತ್ಸವಕ್ಕೆ ಶನಿವಾರ ವಿಧ್ಯುಕ್ತ ತೆರೆ ಕಂಡಿತು. 9 ದಿನಗಳ ಕಾಲ ಶ್ರೀ ಪಾರ್ವತಿ ದೇವಿಗೆ ವಿಶೇಷ ಪೂಜೆ ನಡೆದಿತ್ತು. ವಿಜಯದಶಮಿ ದಿನವಾದ ಶನಿವಾರ ದೇವಿಯ ವಿಗ್ರಹವನ್ನು ಅಲಂಕೃತ ಮಂಟಪದಲ್ಲಿ ಪ್ರತಿಷ್ಠಾಪಿಸಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಉತ್ಸವ ನಡೆಸಲಾಯಿತು. ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ವೀರಗಾಸೆ, ಡೊಳ್ಳುಕುಣಿತ, ಗೊಂಬೆ ಕುಣಿತ ಜನರನ್ನು ಅಕರ್ಷಿಸಿತು. ಸಂಜೆ ಆನೆಕೆರೆಯಲ್ಲಿ ಉತ್ಸವ ಮೂರ್ತಿಯನ್ನು ವಿಸರ್ಜಿಸಲಾಯಿತು. ದೇವಾಲಯ ಸಮಿತಿ ಪದಾಧಿಕಾರಿಗಳಾದ ನಂದ, ಎಸ್.ಆರ್. ಸೋಮೇಶ್, ಹಾಲೇರಿ ದಿನೇಶ್, ಜಗದೀಶ್, ಆಶಾ ಸತೀಶ್. ಎಲ್.ಎಂ. ಪ್ರೇಮಾ, ಆರ್ಚನಾ, ಲಕ್ಷ್ಮೀ ಮತ್ತಿತರರು ಇದ್ದರು.