ಹಬ್ಬಗಳ ಆಚರಣೆ ಮಹತ್ವ ಪರಿಚಯಿಸಿ

18SPT4
Published on

ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಸಲಹೆ
ಸೋಮವಾರಪೇಟೆ : ಪ್ರತಿಯೊಂದು ಸಮುದಾಯದ ಹೆಗ್ಗುರುತು ಆಗಿರುವ ಹಬ್ಬ, ಹರಿದಿನಗಳ ಆಚರಣೆಯನ್ನು ನಾವು ನಮ್ಮ ಮಕ್ಕಳಿಗೆ ಪರಿಚಯಿಸಬೇಕು ಎಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು.ಸೋಮವಾರಪೇಟೆ ತಾಲೂಕು ನಾರಾಯಣ ಗುರು ಸೇವಾ ಸಮಿತಿ ಮತ್ತು ತುಳುನಾಡು ಬಿಲ್ಲವ ಮಹಿಳಾ ಸಂಘದ ಆಶ್ರಯದಲ್ಲಿ ಭಾನುವಾರ ಇಲ್ಲಿನ ಖಾಸಗಿ ಸಭಾಂಗಣದಲ್ಲಿ ಆಯೋಜಿಸಿದ್ದ 9ನೇ ವರ್ಷದ ಆಟಿ ಸಂಭ್ರಮೋತ್ಸವ ಹಾಗೂ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮುದಾಯಗಳ ಕಲೆ, ಸಂಸ್ಕೃತಿ, ಆಚಾರ, ವಿಚಾರ, ಪರಂಪರೆಗಳು ಮುಂದಿನ ಕಾಲಘಟ್ಟಕ್ಕೂ ಉಳಿಯಬೇಕು. ಹಿರಿಯರ ಸಲಹೆಗಳನ್ನು ಸ್ವೀಕರಿಸಿ, ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು ಎಂದು ಅವರು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net