ಸ್ಮೃತಿ ದಿವಸ ಪಂಜಿನ ಮೆರವಣಿಗೆ

IMG_20230814_205151_318.jpg
Published on

ಹುಬ್ಬಳ್ಳಿ: ನಗರದಲ್ಲಿ ಸೋಮವಾರ ಭಗತ್ ಸಿಂಗ್ ಅಭಿಮಾನಿ ಬಳಗದ ವತಿಯಿಂದ ದೇಶ ವಿಭಜನೆ ಒಂದು ದುರಂತ ಕತೆ ಸ್ಮೃತಿ ದಿವಸ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು.

ನಗರದ ಸ್ಟೇಶನ್ ರಸ್ತೆ ಅಂಬೇಡ್ಕರ ಸರ್ಕಲ್ ನಿಂದ ಮೆರವಣಿಗೆ ಆರಂಭವಾಗಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಬಿಜೆಪಿ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ, ನಿವೃತ್ತ ಸೈನಿಕ ಶ್ರೀಧರ ಜೋಶಿ, ದತ್ತಮೂರ್ತಿ ಕುಲಕರ್ಣಿ, ರಾಜಣ್ಣ ಕೊರವಿ, ರವಿ ನಾಯಕ, ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net