

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಭೂಮಿ ಪೂಜೆ, ಉದ್ಘಾಟನೆ ಕಾರ್ಯಕ್ರಮಗಳಿಗೆ ಆಹ್ವಾನಿಸದೆ ನಿರ್ಲಕ್ಷ್ಯ ಮಾಡುವುದು ಸಲ್ಲದು. ಅಧಿಕಾರಿಗಳ ವರ್ತನೆ ವಿರುದ್ಧ ಸಂಸತ್ತಿಗೆ ಹೋಗಬೇಕಾಗುತ್ತದೆ ಎಂದು ಸಂಸದ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ದಿಶಾ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜೆಜೆಎಂಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ, ಉದ್ಘಾಟನೆಗೆ ಲೋಕಸಭಾ ಸದಸ್ಯರನ್ನು ಏಕೆ ಆಹ್ವಾನಿಸುತ್ತಿಲ್ಲ. ನಿಯಮಗಳ ಎಲ್ಲ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಆದರೆ, ಅಧಿಕಾರಿಗಳು ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಗುರಿ ಆಗಬೇಕಾಗುತ್ತದೆ ಎಚ್ಚರಿಕೆಯಿಂದ ಕೆಲಸ ಮಾಡಿ.
ಕ್ಷೇತ್ರದಲ್ಲಿ ಲೋಕಸಭಾ ಸದಸ್ಯರನ್ನು ನಿರ್ಲಕ್ಷಿಸುವ ವಿಷಯ ಸಂಸತ್ತಿಗೆ ತೆಗೆಸುಕೊಂಡು ಹೋಗಬೇಕಾಗುತ್ತದೆ ಎಂದರು.
ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಮಾತನಾಡಿ, ಜಿಲ್ಲೆಯಲ್ಲಿ ಜನಪ್ರತಿನಿಧಿಗಳು ಅಲ್ಲದವರು ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಿಸುತ್ತಿದ್ದಾರೆ. ಅಧಿಕಾರಿಗಳು ಅವರಿಗೆ ಏಕೆ ಅವಕಾಶ ನೀಡುತ್ತಿದ್ದೀರಿ ಎಂದು ತರಾಟೆಗಡ ತೆಗೆದುಕೊಂಡರು.